ಯಲಹಂಕ: ಉಪನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಮಹಾಯೋಗಿ ವೇಮನ ಸೌಹಾರ್ದ ಪತ್ತಿನ ಸಹಕಾರ ಸಂಘದ 14ನೇ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ಸಂಘದ ಅಧ್ಯಕ್ಷ ಎಂ.ಮುನಿರೆಡ್ಡಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಸಂಘದಲ್ಲಿ ಆರ್ಥಿಕ ಚಟುವಟಿಕೆಗಳ ಜತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಂಕಷ್ಟದಲ್ಲಿರುವ ಸಂಘದ ಸದಸ್ಯರಿಗೆ ನೆರವು ಸೇರಿ ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಯಲಹಂಕ ಉಪನಗರ, ಬೈರತಿ ಮತ್ತು ವರ್ತೂರಿನಲ್ಲಿ ಶಾಖೆಗಳನ್ನು ಹೊಂದಿರುವ ಸಂಘದ ಸದಸ್ಯರಲ್ಲಿ ಹೆಚ್ಚಿನ ಸಮನ್ವಯತೆಯಿದ್ದು, ಪಾರದರ್ಶಕ ಆಡಳಿತಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಂಘದ ಏಳಿಗೆಗಾಗಿ ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.
ಸದಸ್ಯರಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಹಾಗೂ ಬಡಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಘದ ಮುಂದಿನ ಕ್ರಿಯಾಯೋಜನೆಯಲ್ಲಿ ಡಯೊಗ್ನಾಸ್ಟಿಕ್ ಹಾಗೂ ಡಯಾಲಿಸಿಸ್ ಕೇಂದ್ರಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ನಿಧನಹೊಂದಿದ ಸದಸ್ಯರ ಕುಟುಂಬ ವರ್ಗದವರಿಗೆ ಪರಿಹಾರಧನದ ಚೆಕ್ ವಿತರಿಸಲಾಯಿತು.
ಸಂಘದ ಉಪಾಧ್ಯಕ್ಷ ಎಸ್.ಎನ್.ಸಂಪತ್ ಕುಮಾರ್, ನಿರ್ದೇಶಕರಾದ ಎಚ್.ರಾಜಣ್ಣ, ಬಿ.ಕೆ.ರಾಜರೆಡ್ಡಿ, ಎಸ್.ಜಿ.ನರಸಿಂಹಮೂರ್ತಿ, ಎಂ.ಮೋಹನ್ ಕುಮಾರ್, ಅರುಣ ಪ್ರಕಾಶ್, ಬಿ.ಎಂ.ಗೀತಾ, ಟಿ. ಎನ್.ಶ್ರೀನಿವಾಸ್, ಕೆ.ಜಿ.ರಾಮಕೃಷ್ಣಯ್ಯ, ಜಿ.ನರಸಿಂಹಮೂರ್ತಿ, ಸಿ. ಶ್ರೀನಿವಾಸ್, ಕೆ.ವಿ. ಸತೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.