ADVERTISEMENT

ಮೀನಾಕ್ಷಿ ಬಾಳಿಗೆ ‘ಯಶೋಧರಮ್ಮ ದಾಸಪ್ಪ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 15:32 IST
Last Updated 18 ಜೂನ್ 2024, 15:32 IST
ಮೀನಾಕ್ಷಿ ಬಾಳಿ
ಮೀನಾಕ್ಷಿ ಬಾಳಿ   

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ 2024ನೇ ಸಾಲಿನ ‘ಯಶೋಧರಮ್ಮ ದಾಸಪ್ಪ ಪ್ರಶಸ್ತಿ’ಗೆ ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ ಆಯ್ಕೆಯಾಗಿದ್ದಾರೆ. 

ಪ್ರಶಸ್ತಿಯು ₹ 15 ಸಾವಿರ ನಗದು ಒಳಗೊಂಡಿದೆ. ಮೀನಾಕ್ಷಿ ಬಾಳಿ ಅವರು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಸಮಾಜವಾದಿ ಚಿಂತನೆಗಳಿಂದ ಆಕರ್ಷಿತರಾಗಿ ಜನಪರ ಚಳವಳಿಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಶೋಷಿತ, ದಮನಿತರ ನೋವಿಗೆ ಮಿಡಿಯಲೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಹೋರಾಟಗಳಲ್ಲಿ ಮುನ್ನುಗ್ಗಿದರು. 2005ರಲ್ಲಿ ಹೆಣ್ಣು ಭ್ರೂಣಹತ್ಯೆ ವಿರೋಧಿ ಆಂದೋಲನವನ್ನು ಹುಟ್ಟುಹಾಕಿ, ರಾಜ್ಯದಾದ್ಯಂತ ಸಂಚರಿಸಿ ಅರಿವು ಮೂಡಿಸಿದರು. ಸದ್ಯ ರಾಜ್ಯ ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷರಾಗಿದ್ದಾರೆ ಎಂದು ಜನಶಕ್ತಿ ಕೇಂದ್ರದ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ. 

ಇದೇ 25ರಂದು ಕನ್ನಡಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿಗಳ ಸಲಹೆಗಾರ ಹಾಗೂ ಶಾಸಕ ಬಿ.ಆರ್.ಪಾಟೀಲ ಅವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ. ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಮತ್ತು ಸಾಹಿತಿ ಬಸವರಾಜ ಗಾರ್ಗಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ. ಪತ್ರಕರ್ತ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಅಧ್ಯಕ್ಷತೆ ವಹಿಸುತ್ತಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.