ಬೆಂಗಳೂರಿನಲ್ಲಿ ಹಲವು ಪ್ರತಿಭಟನೆಗಳು, ದುರಂತಗಳು ಸಂಭವಿಸಿದ ವರ್ಷವಿದು.ಪ್ರಮುಖ ವಿದ್ಯಮಾನಗಳ ಇಣುಕು ನೋಟ ಇಲ್ಲಿದೆ.
ಜನವರಿ 30: ಮದ್ಯ ನಿಷೇಧಕ್ಕೆ ಆಗ್ರಹಿಸಿ ಮಹಿಳೆಯರಿಂದ ಚಿತ್ರದುರ್ಗದಿಂದ ರಾಜಧಾನಿಗೆ ಪಾದಯಾತ್ರೆ
ಮಾರ್ಚ್ 16: ಎಲಿವೇಟೆಡ್ ಕಾರಿಡಾರ್ ಕಾಮಗಾರಿ ವಿರೋಧಿಸಿ ನಾಗರಿಕರ ಹೋರಾಟ.
ಮಾ. 31: ‘ರಣಂ’ ಸಿನಿಮಾ ಶೂಟಿಂಗ್ ವೇಳೆ ಸಂಭವಿಸಿದ್ದ ಸ್ಫೋಟದಲ್ಲಿ ತಾಯಿ– ಮಗು ಮೃತಪಟ್ಟ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸಂಬಂಧಿಕರು ಬಾಗಲೂರು ಠಾಣೆ ಬಳಿಯ ಮೊಬೈಲ್ ಟವರ್ ಏರಿ ಪ್ರತಿಭಟನೆ.
ಮೇ 30: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತೆರೆಯುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ.
ಜೂನ್ 16: ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ಮಾಡುವ ಸಮ್ಮಿಶ್ರ ಸರ್ಕಾರದ ಕ್ರಮವನ್ನು ಖಂಡಿಸಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ಗೆ ಮುತ್ತಿಗೆಗೆ ಯತ್ನ.
ಜೂನ್ 25: ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ.
ಸೆಪ್ಟೆಂಬರ್ 11: ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದನ್ನು ಖಂಡಿಸಿ ಒಕ್ಕಲಿಗ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ.
ಅಕ್ಟೋಬರ್ 10: ಕೆರೆಕೋಡಿ ದುರಂತ: ದೊಡ್ಡಬಿದರಕಲ್ಲು ಕೆೆರೆಯ ಕೋಡಿ ಹರಿದು ನೂರಾರು ಮನೆಗಳಿಗೆ ನೀರು.
ನವೆಂಬರ್ 1: ಮಿಂಟೊ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೈಫಲ್ಯ ಪ್ರಕರಣ ಸಂಬಂಧ ವೈದ್ಯರ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರಿಂದಾಗಿ, ವೈದ್ಯರಿಂದಲೂ ಪ್ರತಿಭಟನೆ.
ನವೆಂಬರ್ 10: ಮನೆಗಳಿಗೆ ನುಗ್ಗಿದ ನೀರು: ಹೊಸಕೆರೆಹಳ್ಳಿಯ ಕೆರೆಯ ಕೋಡಿ ಒಡೆದು ಸುತ್ತಮುತ್ತಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರ.
ನವೆಂಬರ್ 24: ಕೆರೆ ದಂಡೆಗೆ ಧಕ್ಕೆ: ಹುಳಿಮಾವು ಕೆರೆಯ ದಂಡೆ ಒಡೆದು ಹುಳಿಮಾವು, ಸಾಯಿಬಾಬಾ ದೇವಸ್ಥಾನದ ರಸ್ತೆ, ಬೇಗೂರು ರಸ್ತೆ, ವಿಶ್ವೇಶ್ವರಯ್ಯ ರಸ್ತೆ ಹಾಗೂ ಅಕ್ಕಪಕ್ಕದ ಪ್ರದೇಶದಲ್ಲಿ ಪ್ರವಾಹ.
ಡಿಸೆಂಬರ್ 20: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಾವಿರಾರು ಮಂದಿ ಪುರಭವನ ಎದುರು ಪ್ರತಿಭಟನೆ.
ಡಿಸೆಂಬರ್ 22: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಸಾವಿರಾರು ಮಂದಿ ಪುರಭವನ ಎದುರು ಪ್ರತಿಭಟನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.