ಬೆಂಗಳೂರು: ‘ಮೂರ್ನಾಲ್ಕು ದಿನಗಳಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.
ಡಿಸೆಂಬರ್ 30ರಂದು ನಟ ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆ ಅಂಗವಾಗಿಮುಖ್ಯಮಂತ್ರಿ ಅವರನ್ನು ಭೇಟಿಯಾದನಟಿ ಭಾರತಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಕುರಿತು ಚರ್ಚಿಸಿದರು.
ಹಿನ್ನಲೆ
ಸ್ಮಾರಕ ನಿರ್ಮಾಣ ಎಲ್ಲಿ ಮಾಡಬೇಕು ಎಂದೇ ಅನೇಕ ವರ್ಷಗಳ ವರೆಗೆ ವಿವಾದ ಉಂಟಾಗಿತ್ತು. ವಿಷ್ಣುವರ್ಧನ್ ಅವರ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋದ ಜಾಗದಲ್ಲಿಯೇ ವಿಷ್ಣುವರ್ಧನ್ ಸಮಾಧಿ ನಿರ್ಮಿಸಬೇಕು ಎಂಬ ಎಲ್ಲರ ಅಭಿಲಾಷೆಗೆಬಾಲಕೃಷ್ಣ ಅವರ ಕುಟುಂಬ ಸದಸ್ಯರು ತಕರಾರು ಎತ್ತಿದ್ದರು. ಆಗ ವಿಷ್ಣು ಸೇನಾ ಸಮಿತಿ ಪ್ರತಿಭಟನೆ ನಡೆಸಿತ್ತು.
ಅದಾದ ನಂತರ ಸ್ಮಾರಕ ನಿರ್ಮಾಣಕ್ಕೆಬಾಲಕೃಷ್ಣ ಅವರ ಮಕ್ಕಳು ಒಪ್ಪಿಕೊಂಡಿದ್ದರು. ಆದರೆ, ಭಾರತಿ ವಿಷ್ಣು ವರ್ಧನ್ ಅವರು ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಪಟ್ಟಿ ಹಿಡಿದರು. ಅದಕ್ಕಾಗಿ ಸರ್ಕಾರ ಮೈಸೂರಿನ ಕಸಬಾ ಹೋಬಳಿಯ ಹಾಲಾಳು ಗ್ರಾಮದಲ್ಲಿಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಿತ್ತು. ಮಂಜೂರಾತಿ ಕುರಿತು ಜಯಪುರ ಹೋಬಳಿಯ ಉದ್ಬೂರು ಗ್ರಾಮದ ಮಹದೇವಪ್ಪ ಸೇರಿದಂತೆ ಐವರು ತಕರಾರು ತೆಗೆದಿದ್ದರು.
ಈ ವ್ಯಾಜ್ಯ ಕೋರ್ಟ್ ಮೆಟ್ಟಿಲೇರಿತ್ತು. ಇದರಿಂದಾಗಿ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಕಾಮಗಾರಿ ಮುಂದುವರಿಕೆಗೆ ತಡೆ ನೀಡಿತ್ತು.
ಈ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ ಸೇರಿದಂತೆ ಮೈಸೂರು ಜಿಲ್ಲಾಡಳಿತ ಹೈಕೋರ್ಟ್ ಮೆಟ್ಟಿಲೇರಿತ್ತು. ಏಪ್ರಿಲ್‌ನಲ್ಲಿ ಈ ಅರ್ಜಿಯ ವಿಚಾರಣೆ ನಡೆಸಿದನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧಿನ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತು. ಅದರಿಂದ ಸ್ಮಾರಕ ನಿರ್ಮಾಣಕ್ಕಿದ್ದಕಾನೂನು ತೊಡಕು ಬಗೆಹರಿದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.