ಕೆಂಗೇರಿ: ಯಶವಂತಪುರದಲ್ಲಿ ಜೆಡಿಎಸ್‌ಗೆ 1,16,990 ಮತಗಳು ಬಂದಿವೆ. ಹಾಗಾಗಿ, ಯಶವಂತಪುರ ಕ್ಷೇತ್ರದ ಉಪಚುನಾವಣೆಯಲ್ಲಿ ನಾನು ಸೋತಿಲ್ಲ. ಈ ಕ್ಷೇತ್ರದಲ್ಲಿ ಪಕ್ಷವು ಈಗಲೂ ಸದೃಢವಾಗಿದೆ’ ಎಂದು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸೋಲು ಕಂಡ ಟಿ.ಎನ್.ಜವರಾಯಿಗೌಡ ಹೇಳಿದರು.
ಸೀಗೇಹಳ್ಳಿಯಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಕೃತಜ್ಞತಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲ ಬೂತ್‌ಗಳಲ್ಲೂ ಜನತಾದಳಕ್ಕೆ ಮತಗಳು ದೊರಕಿವೆ. ಪಕ್ಷವು ಈ ಕ್ಷೇತ್ರದಲ್ಲಿ ಈಗಲೂ ತನ್ನದೇ ಆದ ಹಿಡಿತ ಹೊಂದಿದೆ. ಕಾರ್ಯಕರ್ತರು ಎದೆಗುಂದುವ ಅವಶ್ಯಕತೆ ಇಲ್ಲ’ ಎಂದರು.
‘ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಒಪ್ಪಲಿಲ್ಲ. ಸ್ಪರ್ಧಿಸುವಂತೆ ಸೂಚಿಸಿದರು. ಕ್ಷೇತ್ರದಲ್ಲಿ ಹಣ ಬಲ ಗೆದ್ದಿದೆ’ ಎಂದರು.
‘ಚುನಾವಣೆಗೆ ಮೊದಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನನ್ನನ್ನೂ ಭೇಟಿ ಮಾಡಿದ್ದರು. ಚುನಾವಣೆಗೆ ಸ್ಪರ್ಧಿಸದಂತೆ ಒತ್ತಡ ಹೇರಿದರು. ಅವರ ಮಾತನ್ನು ತಿರಸ್ಕರಿಸಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.