ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕುರುಬರಹಳ್ಳಿ ಜೆ.ಸಿ. ನಗರದ ಬಾಡಿಗೆ ಮನೆಯಲ್ಲಿ ನೆಲಸಿದ್ದ ಯುವತಿ ನೇಣುಬಿಗಿದುಕೊಂಡು ಭಾನುವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಐಶ್ವರ್ಯಾ(18) ಆತ್ಮಹತ್ಯೆ ಮಾಡಿಕೊಂಡ ಯುವತಿ.
‘ಯಾದಗಿರಿಯ ಐಶ್ವರ್ಯಾ ಅವರು ತಮ್ಮ ಕುಟುಂಬದ ಸದಸ್ಯರ ಜತೆಗೆ ನಗರಕ್ಕೆ ಬಂದಿದ್ದರು. ಕುಟುಂಬಸ್ಥರು ಜೀವನ ನಿರ್ವಹಣೆಗಾಗಿ ಬೇರೆ ಬೇರೆ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಶ್ವರ್ಯಾ ಅವರ ಸಹೋದರ ಸಂಜೆ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.
‘ಕುಟುಂಬಸ್ಥರಿಂದ ಮಾಹಿತಿ ಪಡೆಯಲಾಗಿದೆ. ಯಾವ ಕಾರಣಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ಎಂಬುದು ಗೊತ್ತಾಗಿಲ್ಲ’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.