ADVERTISEMENT

ಬೀದರ್‌: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 1030 ವಿದ್ಯಾರ್ಥಿಗಳು ಗೈರು

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2024, 15:38 IST
Last Updated 25 ಮಾರ್ಚ್ 2024, 15:38 IST

ಬೀದರ್‌: ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಆರಂಭಗೊಂಡಿದ್ದು, ಮೊದಲ ದಿನ ನಡೆದ ಮಾತೃಭಾಷೆ ವಿಷಯದ ಪರೀಕ್ಷೆಗೆ 1,030 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಮೊದಲ ಸಲ ಪರೀಕ್ಷೆ ಬರೆಯಬೇಕಿದ್ದ 837, 193 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1,030 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಪರೀಕ್ಷೆಗೆ ಒಟ್ಟು 27,513 ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಸಿಕೊಂಡಿದ್ದರು. 25,693 ಮೊದಲ ಸಲ ಪರೀಕ್ಷೆ ಬರೆಯುವವರು, 790 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.