ADVERTISEMENT

ಬನ್ನಳ್ಳಿ: ರಾಮಲಿಂಗೇಶ್ವರ ದೇಗುಲಕ್ಕೆ ₹2.50 ಕೋಟಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2024, 15:49 IST
Last Updated 28 ಫೆಬ್ರುವರಿ 2024, 15:49 IST

ಬೀದರ್‌: ‘ತಾಲ್ಲೂಕಿನ ಬನ್ನಳ್ಳಿ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದ ಸಂರಕ್ಷಣೆ ಹಾಗೂ ಜೀರ್ಣೊದ್ಧಾರಕ್ಕಾಗಿ ಕೇಂದ್ರ ಸರ್ಕಾರವು ₹2.50 ಕೋಟಿ ಅನುದಾನ ಮಂಜೂರು ಮಾಡಿದೆ’ ಎಂದು ಕೇಂದ್ರ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಭಾರತೀಯ ಪುರಾತತ್ವ ಮತ್ತು ಸರ್ವೇಕ್ಷಣಾ ಇಲಾಖೆಯು ದೇವಸ್ಥಾನದ ಜೀರ್ಣೊದ್ಧಾರ ಮಾಡಲಿದೆ. ಮೂರ್ನಾಲ್ಕು ತಿಂಗಳ ಹಿಂದೆ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆಯವರು ದೇವಸ್ಥಾನದ ಅಭಿವೃದ್ಧಿ ಕುರಿತು ನನ್ನೊಂದಿಗೆ ಚರ್ಚಿಸಿದ್ದರು. ಅದರ ಇತಿಹಾಸದ ಕುರಿತು ತಿಳಿಸಿದ್ದರು. ದೇವಸ್ಥಾನಕ್ಕೆ ಪುರಾತತ್ವ ಇಲಾಖೆಯ ಅಧಿಕಾರಿಗಳನ್ನು ಕರೆದೊಯ್ದು ವಿವರಿಸಿದ್ದರು. ಬಳಿಕ ಕೇಂದ್ರ ಪ್ರವಾಸೋದ್ಯಮ ಇಲಾಖೆಗೆ ಪ್ರಸ್ತಾವ ಕಳಿಸಲಾಗಿತ್ತು. ಈ ಕುರಿತು ಇಲಾಖೆಯ ಸಚಿವ ಜಿ. ಕಿಶನ್‌ ರೆಡ್ಡಿ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿದ್ದೆ. ಅದಕ್ಕೆ ಅವರು ಸ್ಪಂದಿಸಿದ್ದಾರೆ ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT