ಬೀದರ್: ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಜ. 3 ರಂದು ಬೆಳಿಗ್ಗೆ 11.30ಕ್ಕೆ ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಕಾಯ್ದೆ ಸಾಧಕ-ಬಾಧಕ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಸಮಿತಿಯ ಮುಖಂಡ ರಜಾಕ್ ಉಸ್ತಾದ್, ಕೆಆರ್‍ಇ ಸಂಸ್ಥೆ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಅಷ್ಟೂರ, ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಚಂದ್ರಕಾಂತ ನಾಸಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಸಮಿತಿಯ ವಿಭಾಗೀಯ ಉಪಾಧ್ಯಕ್ಷ ಪ್ರೊ. ದೇವೇಂದ್ರ ಕಮಲ್, ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷ ಶಂಕರರಾವ್ ಹೊನ್ನಾ, ವಕೀಲ ಅಶೋಕ ಮಾನೂರೆ, ಗಣಪತರಾವ್ ಮಂಗಳೂರೆ, ಶಿವರಾಜ ಪಾಟೀಲ, ಸುಭಾಷ ಗಾದಗೆ, ಬಸವರಾಜ ಪಾಟೀಲ, ಸುಧಾಕರ ಗಾದಗೆ ಹಾಗೂ ಚನ್ನಬಸಪ್ಪ ಹಾಲಹಳ್ಳಿ ಪಾಲ್ಗೊಳ್ಳಲಿದ್ದಾರೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಪಂಡಿತರಾವ್ ಚಿದ್ರಿ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ಬೆಲ್ದಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.