ADVERTISEMENT

ಬೀದರ್‌: ಅಬ್ದುಲ್‌ ಖದೀರ್‌ಗೆ ‘ಸಿಲ್ವರ್‌ ಎಲಿಫೆಂಟ್‌’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2024, 16:08 IST
Last Updated 9 ಫೆಬ್ರುವರಿ 2024, 16:08 IST
ಅಬ್ದುಲ್‌ ಖದೀರ್‌
ಅಬ್ದುಲ್‌ ಖದೀರ್‌   

ಬೀದರ್‌: ನಗರದ ಶಾಹೀನ್‌ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಬ್ದುಲ್‌ ಖದೀರ್‌ ಅವರು ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ‘ಸಿಲ್ವರ್‌ ಎಲಿಫೆಂಟ್‌’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಗೆ ನೀಡಿದ ಅನುಪಮ ಕೊಡುಗೆಗಾಗಿ ಅಬ್ದುಲ್ ಖದೀರ್ ಅವರನ್ನು 2023–24ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್‌ನ ಅತ್ಯುನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಗೈಡ್ಸ್‌ನ ರಾಷ್ಟ್ರೀಯ ಹೆಚ್ಚುವರಿ ಮುಖ್ಯ ಆಯುಕ್ತ ಎಂ.ಎ. ಖಾಲೀದ್ ಶುಕ್ರವಾರ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT