ADVERTISEMENT

ಅಕ್ಕ ಅನ್ನಪೂರ್ಣತಾಯಿ ನಿಧನ

​ಪ್ರಜಾವಾಣಿ ವಾರ್ತೆ
Published 23 ಮೇ 2024, 10:29 IST
Last Updated 23 ಮೇ 2024, 10:29 IST
   

ಬೀದರ್: ಇಲ್ಲಿಯ ಲಿಂಗಾಯತ ಮಹಾ ಮಠದ ಅಕ್ಕ ಅನ್ನಪೂರ್ಣತಾಯಿ (61) ಹೈದರಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಕಳೆದ ಅನೇಕ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಸನ್ಯಾಸ ದೀಕ್ಷೆ ಸ್ವೀಕರಿಸಿದ್ದ ಅವರು, ಬಸವ ತತ್ವ ಪ್ರಚಾರಕ್ಕೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು.

ಶುಕ್ರವಾರ (ಮೇ 24) ಸಂಜೆ 4ಕ್ಕೆ ನಗರದ ಬಸವಗಿರಿಯಲ್ಲಿ ಲಿಂಗಾಯತ ವಿಧಿ ವಿಧಾನಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಲಿಂಗಾಯತ ಮಹಾ ಮಠದ ಹೇಳಿಕೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.