ADVERTISEMENT

‘ಸದೃಢ, ಶಕ್ತಿಯುತ ಜೀವನಕ್ಕೆ ಯೋಗ ಸಹಕಾರಿ’

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 16:29 IST
Last Updated 19 ಜೂನ್ 2024, 16:29 IST
ಭಾಲ್ಕಿಯ ಪುರಭವನದಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು
ಭಾಲ್ಕಿಯ ಪುರಭವನದಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು   

ಭಾಲ್ಕಿ: ಆರೋಗ್ಯವಂತ ಜೀವನಕ್ಕೆ ಯೋಗ ಅತ್ಯಂತ ಸಹಕಾರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಪುರಭವನದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ತಾಲ್ಲೂಕು ಪತಂಜಲಿ ಸಮಿತಿ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶ್ವ ಮತ್ತು ಇಡೀ ಮನುಕುಲಕ್ಕೆ ಭಾರತ ಯೋಗದ ಮೂಲಕ ಬಹುದೊಡ್ಡ ಕೊಡುಗೆ ನೀಡಿದೆ. ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಒತ್ತು ನೀಡುತ್ತಿಲ್ಲ. ಎಲ್ಲರೂ ಭೌತಿಕ ಸುಖದತ್ತ ಸಾಗಿದ್ದಾರೆ. ಇದರಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿ ವಿವಿಧ ರೋಗಿಗಳಿಗೆ ತುತ್ತಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ಪ್ರತಿಯೊಬ್ಬರೂ ಯೋಗದ ಬಗ್ಗೆ ಜಾಗೃತಿ ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಮನಸು ಹಿಡಿದಿಡುವ ಶಕ್ತಿ ಯೋಗಕ್ಕಿದೆ. ಆದ್ದರಿಂದ ಎಲ್ಲರೂ ಪ್ರತಿದಿನ ಒಂದಿಷ್ಟು ಸಮಯವನ್ನು ಯೋಗಕ್ಕೆ ಮೀಸಲಿಡಬೇಕು ಎಂದು ತಿಳಿಸಿದರು.

ಪತಂಜಲಿ ಯೋಗ ಸಮಿತಿ ಸಂಚಾಲಕ ಹರಿದೇವ ರುದ್ರಮುನಿ, ಚಂದ್ರಕಾಂತ ಹೈಬತೆ ಅವರು ಯೋಗದ ವಿವಿಧ ಆಸನತೋರಿಸಿ ಕೊಟ್ಟರು.

ಪ್ರಮುಖರಾದ ಚನ್ನಬಸವ ಬಳತೆ, ಸಂತೋಷ ಬಿಜಿ ಪಾಟೀಲ, ಓಂಪಾಟೀಲ, ವೈಜನಾಥ ಭಂಡೆ, ಮಂಗಲಾ ಕಾಡೋದೆ, ಪಂಡಿತ ಪಾಟೀಲ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ ಮಾಶೆಟ್ಟೆ ಇದ್ದರು.

ಯೋಗ ಭವನಕ್ಕೆ ಮನವಿ: ಪಟ್ಟಣದಲ್ಲಿ ಯೋಗ ಚಟುವಟಿಕೆಗಳು ನಿರಂತರವಾಗಿ ನಡೆಸಲು ಯೋಗ ಭವನ ನಿರ್ಮಿಸಿಕೊಡುವಂತೆ ತಾಲ್ಲೂಕು ಪತಂಜಲಿ ಯೋಗ ಸಮಿತಿ ಒತ್ತಾಯಿಸಿದೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದು, ಯೋಗಕ್ಕೆ ಸೂಕ್ತ ಸ್ಥಳಾವಕಾಶ, ಕಟ್ಟಡ ಇಲ್ಲದೇ ಯೋಗ ಚಟುವಟಿಕೆ ನಡೆಸಲು ಅನಾನುಕೂಲ ಆಗುತ್ತಿದೆ. ಹೀಗಾಗಿ ಯೋಗ ಭವನ ನಿರ್ಮಿಸಬೇಕು ಎಂದು ಶಿವನಾಂದ ಗುಂದಗೆ ಅವರು ಸಚಿವರಿಗೆ ಮನವಿ ಸಲ್ಲಿಸಿದರು.

ಯೋಗಾಸನದಲ್ಲಿ ಭಾಗಿಯಾದ ಸಚಿವ ಈಶ್ವರ ಖಂಡ್ರೆ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.