ADVERTISEMENT

ಬಸವ ತತ್ವದಲ್ಲಿದೆ ಸಮಸ್ಯೆಗಳಿಗೆ ಪರಿಹಾರ

ಬಸವ ಜಯಂತಿ ಸಮಾರಂಭದಲ್ಲಿ ಬಸವಲಿಂಗ ಸ್ವಾಮೀಜಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 12 ಮೇ 2024, 15:50 IST
Last Updated 12 ಮೇ 2024, 15:50 IST
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಅನುಭಾವ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಸಂತ ಬಸವಲಿಂಗ ಸ್ವಾಮೀಜಿ ಮಾತನಾಡಿದರು
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಅನುಭಾವ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಸಂತ ಬಸವಲಿಂಗ ಸ್ವಾಮೀಜಿ ಮಾತನಾಡಿದರು   

ಭಾಲ್ಕಿ: ‘ಸಮಾಜದ ಎಲ್ಲ ಸಮಸ್ಯೆಗಳಿಗೆ ಬಸವ ತತ್ವದಲ್ಲಿ ಪರಿಹಾರವಿದೆ. ಸರ್ವರೂ ಬಸವ ತತ್ವವನ್ನು ಅಳವಡಿಸಿಕೊಳ್ಳಬೇಕು’ ಎಂದು ರಾಷ್ಟ್ರ ಸಂತ ಬಸವಲಿಂಗ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಬಸವ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ 5 ದಿನಗಳ ವಿಶೇಷ ಅನುಭಾವ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಜಾತೀಯತೆ, ಮೂಢನಂಬಿಕೆ, ಕಂದಾಚಾರ, ಲಿಂಗ ಅಸಮಾನತೆ, ಆರ್ಥಿಕ ಅಸಮಾನತೆ ಸೇರಿ ಇತರ ಗಂಭೀರ ಸಮಸ್ಯೆಗಳನ್ನು ಬಸವಾದಿ ಶರಣರು ಬಸವ ತತ್ವದ ಆಚರಣೆ, ಅನುಷ್ಠಾನದ ಮೂಲಕ ತೊಡೆದು ಹಾಕಲು ಅವಿರತವಾಗಿ ಶ್ರಮಿಸಿದ್ದರು’ ಎಂದು ತಿಳಿಸಿದರು.

ADVERTISEMENT

ಇಂದು ಸಮಾಜವನ್ನು ಬಹುವಾಗಿ ಕಾಡುತ್ತಿರುವ ಮೇಲು–ಕೀಳು ಎನ್ನುವ ಭಾವ. ಉಗ್ರವಾದ ಒಳಗೊಂಡಂತೆ ಇತರ ಅನೇಕ ಸಮಸ್ಯೆಗಳು ತ್ವರಿತವಾಗಿ ಬಗೆ ಹರಿಯಬೇಕಾದರೆ ಪ್ರತಿಯೊಬ್ಬರೂ ಬಸವಣ್ಣನವರ ವಚನಗಳ ಅಧ್ಯಯನ ಮಾಡಬೇಕು. ಅವುಗಳ ಆಶಯದಂತೆ ಜೀವನ ಸಾಗಿಸಬೇಕು ಎಂದು ಹೇಳಿದರು.

ಜಯಕ್ಕಾ ಗಾಂವ್ಕರ್ ಅವರು ವಿಶೇಷ ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ಬಿ.ಇಡಿ ಕಾಲೇಜಿನ ಹಾಗೂ ದತ್ತು ಕೇಂದ್ರದ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಪ್ರಾಚಾರ್ಯರಾದ ಬಸವರಾಜ ಮೊಳಕೀರೆ, ಆಶಾ ಮುದಾಳೆ, ರಾಜು ಎನ್., ದತ್ತು ಕೇಂದ್ರದ ಅಧೀಕ್ಷಕ ಅನಿಲಕುಮಾರ ಹಾಲಕುಡೆ, ಮಹಾಲಕ್ಷ್ಮಿ ಕರಿಮಣಿ ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.