ಜನವಾಡ: ಬೀದರ್ ತಾಲ್ಲೂಕಿನ ಕಪಲಾಪುರ(ಎ) ಗ್ರಾಮದ ಅಕ್ಕ ಮಹಾದೇವಿ ಅನುಭವ ಮಂಟಪದಲ್ಲಿ ಶುಕ್ರವಾರ (ಡಿ.30) ಬೆಳಿಗ್ಗೆ 11ಕ್ಕೆ ಬಸವೇಶ್ವರ ಹಾಗೂ ಡಾ. ಚನ್ನಬಸವ ಪಟ್ಟದ್ದೇವರ ಮೂರ್ತಿ ಅನಾವರಣ ಸಮಾರಂಭ ನಡೆಯಲಿದೆ.
ಕೇಂದ್ರದ ರಾಸಾಯನಿಕ ಖಾತೆ ರಾಜ್ಯ ಸಚಿವ ಸಚಿವ ಭಗವಂತ ಖೂಬಾ ಅವರು ಬಸವೇಶ್ವರ ಹಾಗೂ ಶಾಸಕ ಬಂಡೆಪ್ಪ ಕಾಶೆಂಪುರ ಅವರು ಡಾ. ಚನ್ನಬಸವ ಪಟ್ಟದ್ದೇವರ ಮೂರ್ತಿ ಅನಾವರಣಗೊಳಿಸುವರು.
ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಸಾನಿಧ್ಯ, ಹುಲಸೂರಿನ ಶಿವಾನಂದ ಸ್ವಾಮೀಜಿ, ಭಾಲ್ಕಿಯ ಗುರುಬಸವ ಪಟ್ಟದ್ದೇವರು ನೇತೃತ್ವ ಹಾಗೂ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣತಾಯಿ ಸಮ್ಮುಖ ವಹಿಸುವರು.
ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅಧ್ಯಕ್ಷತೆ ವಹಿಸುವರು. ಮಹಾಲಿಂಗ ಸ್ವಾಮೀಜಿ ಪ್ರವಚನ ನೀಡುವರು.
ಮುಖ್ಯ ಅತಿಥಿಗಳಾಗಿ ಭಾರತೀಯ ಬಸವ ಬಳಗದ ರಾಜ್ಯ ಅಧ್ಯಕ್ಷ ಬಾಬುವಾಲಿ, ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಕ.ಸಾ.ಪ ಜಿಲ್ಲಾ ಘಟದ ಅಧ್ಯಕ್ಷ ಸುರೇಶ ಚನಶೆಟ್ಟಿ ಮೊದಲಾದವರು ಪಾಲ್ಗೊಳ್ಳುವರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಈಶ್ವರಿ ಹಣಮಂತರಾವ್ ಮೈಲಾರೆ ಮೆರವಣಿಗೆಗೆ ಚಾಲನೆ ನೀಡುವರು ಎಂದು ಹೇಳಿಕೆ ತಿಳಿಸಿದೆ.
ಬೀದರ್ ಉತ್ಸವ: ಕಟೌಟ್‍ಗೆ ಅನುಮತಿ ಕಡ್ಡಾಯ
ಬೀದರ್: ಬೀದರ್ ಉತ್ಸವ ಪ್ರಯುಕ್ತ ಜ. 1 ರಿಂದ 10 ರ ವರೆಗೆ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಕಟೌಟ್, ಪೋಸ್ಟರ್ ಹಾಗೂ ಬ್ಯಾನರ್ ಅಳವಡಿಸಲು ನಗರಸಭೆ ಅನುಮತಿ ಕಡ್ಡಾಯವಾಗಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.
ಅನುಮತಿ ಪಡೆಯದೆ ಅನಧಿಕೃತವಾಗಿ ಅಳವಡಿಸಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.