ADVERTISEMENT

ಮಕ್ಕಳಿಂದ ಜಾಗೃತಿ ರ್‍ಯಾಲಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2020, 14:44 IST
Last Updated 4 ಜನವರಿ 2020, 14:44 IST
ಬೀದರ್‌ನಲ್ಲಿ ಶನಿವಾರ ನಡೆದ ‘ಬೇಟಿ ಬಚಾವೋ ಬೇಟಿ ಪಢಾವೋ’ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು
ಬೀದರ್‌ನಲ್ಲಿ ಶನಿವಾರ ನಡೆದ ‘ಬೇಟಿ ಬಚಾವೋ ಬೇಟಿ ಪಢಾವೋ’ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು   

ಬೀದರ್‌: ವಿವಿಧ ಶಾಲಾ ಮಕ್ಕಳಿಂದ ನಗರದಲ್ಲಿ ಶನಿವಾರ ‘ಬೇಟಿ ಬಚಾವೋ ಬೇಟಿ ಪಢಾವೋ’ ಜಾಗೃತಿ ರ್‍ಯಾಲಿ ನಡೆಯಿತು.

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಪ್ರೇಮಾವತಿ ಮನಗೂಳಿ ರ್‍ಯಾಲಿಗೆ ಚಾಲನೆ ನೀಡಿದರು.

ರ್‍ಯಾಲಿಯು ಭಗತ್‌ಸಿಂಗ್‌ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್‌ ವೃತ್ತ, ಜನರಲ್‌ ಕಾರ್ಯಪ್ಪ ವೃತ್ತದ ಮಾರ್ಗವಾಗಿ ಜಿಲ್ಲಾ ರಂಗ ಮಂದಿರ ತಲುಪಿತು. ಮಕ್ಕಳು ಪೋಸ್ಟರ್‌ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.

ADVERTISEMENT

ಬಸವ ತತ್ವ ಶಿಕ್ಷಣ ಸಂಸ್ಥೆಯ ಶ್ರೀಮತಿ ಲಕ್ಷ್ಮೀಬಾಯಿ ಕಮಠಾಣೆ ಕನ್ಯಾ ಪ್ರೌಢ ಶಾಲೆ, ಸರಸ್ವತಿ ಶಾಲೆ, ಸಾಯಿ ಆದರ್ಶ ಶಾಲೆ, ದತ್ತಗಿರಿ ಮಹಾರಾಜ್ ಪಬ್ಲಿಕ್‌ ಶಾಲೆ, ಗುರುನಾನಕ ಪಬ್ಲಿಕ್‌ ಸ್ಕೂಲ್ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ವಕೀಲರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.