ADVERTISEMENT

ಬೀದರ್‌ ಜಿಲ್ಲೆಗೆ ಭಗೀರಥ ಭಾರತ ರಥಯಾತ್ರೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2023, 15:53 IST
Last Updated 7 ಡಿಸೆಂಬರ್ 2023, 15:53 IST
ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆಯ ಜಾಗೃತಿ ಕರಪತ್ರಗಳನ್ನು ಉಪ್ಪಾರ ಸಮಾಜ ಸಂಘದ ಜಿಲ್ಲಾ ಉಪಾಧ್ಯಕ್ಷ ಜಗನ್ನಾಥ ಆಲಗೋಲ್ ತಡಪಳ್ಳಿ ಹಾಗೂ ಪ್ರಮುಖರಾದ ಶಿವಾಜಿರಾವ್ ಸಗರ, ಭೀಮಣ್ಣಾ ಕರಂಜಿ, ಬಾಬು ತಡಪಳ್ಳಿ, ತಾನಾಜಿ ಸಗರ, ಬಾಬುರಾವ್ ಕೊಳ್ಳೂರ, ಶಿವಾಜಿ ಬೆಲ್ದಾಳ ಅವರು ಬೀದರ್‌ನಲ್ಲಿ ಗುರುವಾರ ಬಿಡುಗಡೆಗೊಳಿಸಿದರು
ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆಯ ಜಾಗೃತಿ ಕರಪತ್ರಗಳನ್ನು ಉಪ್ಪಾರ ಸಮಾಜ ಸಂಘದ ಜಿಲ್ಲಾ ಉಪಾಧ್ಯಕ್ಷ ಜಗನ್ನಾಥ ಆಲಗೋಲ್ ತಡಪಳ್ಳಿ ಹಾಗೂ ಪ್ರಮುಖರಾದ ಶಿವಾಜಿರಾವ್ ಸಗರ, ಭೀಮಣ್ಣಾ ಕರಂಜಿ, ಬಾಬು ತಡಪಳ್ಳಿ, ತಾನಾಜಿ ಸಗರ, ಬಾಬುರಾವ್ ಕೊಳ್ಳೂರ, ಶಿವಾಜಿ ಬೆಲ್ದಾಳ ಅವರು ಬೀದರ್‌ನಲ್ಲಿ ಗುರುವಾರ ಬಿಡುಗಡೆಗೊಳಿಸಿದರು    

ಬೀದರ್‌: ‘ಉಪ್ಪಾರ ಸಮಾಜದವರನ್ನು ಒಗ್ಗೂಡಿಸುವ ಉದ್ದೇಶದಿಂದ ಆರಂಭಿಸಿರುವ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆ ಡಿ. 9ರಂದು ಬೀದರ್‌ ನಗರಕ್ಕೆ ಬರಲಿದೆ’ ಎಂದು ಉಪ್ಪಾರ ಸಮಾಜ ಸಂಘದ ಜಿಲ್ಲಾ ಉಪಾಧ್ಯಕ್ಷ ಜಗನ್ನಾಥ ಆಲಗೋಲ್ ತಡಪಳ್ಳಿ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 27ರಂದು ಹಿಮಾಲಯದ ಗಂಗೋತ್ರಿಯಿಂದ ಯಾತ್ರೆ ಆರಂಭಗೊಂಡಿದೆ. ಫೆ. 10ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಕೊನೆಗೊಳ್ಳಲಿದೆ ಎಂದು ಮಾಹಿತಿ ಹಂಚಿಕೊಂಡರು.

ಡಿ. 9ರಂದು ಬೆಳಿಗ್ಗೆ 9.30ಕ್ಕೆ ರಥಯಾತ್ರೆ ಆಗಮಿಸಲಿದೆ. ಛತ್ರಪತಿ ಶಿವಾಜಿ ಮಹಾರಾಜ ವೃತ್ತ, ಭಗತ್‌ ಸಿಂಗ್‌ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದ ಮೂಲಕ ಮೆರವಣಿಗೆ ಸಾಗಿ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಕೊನೆಗೊಳ್ಳಲಿದೆ. ಉಪ್ಪಾರ ಸಮಾಜದವರು, ಸಂಘದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ದೇಶದ ವಿವಿಧ ರಾಜ್ಯಗಳಲ್ಲಿ 11 ಕೋಟಿಗೂ ಹೆಚ್ಚಿನ ಸಂಖ್ಯೆಯಲ್ಲಿ ಉಪ್ಪಾರ ಸಮಾಜದವರು ಇದ್ದಾರೆ. ಇವರನ್ನು ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಕರ್ನಾಟಕದಲ್ಲಿ 25 ಲಕ್ಷ ಜನಸಂಖ್ಯೆ ಇದ್ದು, ಬೀದರ್‌ ಜಿಲ್ಲೆಯಲ್ಲಿ 45 ಸಾವಿರಕ್ಕೂ ಅಧಿಕ ಇದ್ದಾರೆ. ಎಲ್ಲರನ್ನೂ ಈ ಯಾತ್ರೆ ಮೂಲಕ ಒಂದುಗೂಡಿಸಿ, ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಮಹರ್ಷಿ ಭಗೀರಥ ಜಯಂತಿ ಆಚರಿಸಬೇಕು. ಭಗೀರಥ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಿ, ವಾರ್ಷಿಕ ₹2 ಸಾವಿರ ಕೋಟಿ ಅನುದಾನ ಮೀಸಲಿಡಬೇಕು. ಹರಿದ್ವಾರದ ಗಂಗಾನದಿಯ ತಟದಲ್ಲಿ ಉಪ್ಪಾರ ಸಮಾಜಕ್ಕೆ ಸ್ಥಳ ಮೀಸಲಿಟ್ಟು, ಅಲ್ಲಿ ಬೃಹತ್ ಭಗೀರಥ ಮೂರ್ತಿ ಸ್ಥಾಪಿಸಬೇಕು. ರಾಜ್ಯ ಸರ್ಕಾರವು ಉಪ್ಪಾರ ಹಾಗೂ ಅದರ ಉಪ ಜಾತಿಗಳನ್ನು ಪರಿಶಿಷ್ಟ ಜಾತಿ ಮೀಸಲಾತಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಈ ಯಾತ್ರೆ ದೇಶದ 6 ರಾಜ್ಯಗಳಲ್ಲಿ ಸಂಚರಿಸಿದೆ. ಮಹಾರಾಷ್ಟ್ರದ ಉದಗೀರ ಮೂಲಕ ಜಿಲ್ಲೆಗೆ ಬರುತ್ತಿದೆ. ಜಿಲ್ಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹೊಸದುರ್ಗದ ಚಿನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನ ಭಗೀರಥ ಪೀಠಾಧಿಪತಿ ಪುರುಷೋತ್ತಮಾನಂದಪುರಿ ಸ್ವಾಮೀಜಿ, ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರೂ ಆದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಯು. ವೆಂಕೋಬ ವಕೀಲರು ಸೇರಿದಂತೆ ಹಲವರು ಪಾಲ್ಗೊಳ್ಳುವರು ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.