ADVERTISEMENT

ಬಾಲ್ಕಿಯಲ್ಲಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಆರಂಭ

ಬಿಕೆಐಟಿ ಕಾಲೇಜಿನ ಆವರಣದಲ್ಲಿ ಬೃಹತ್ ವೇದಿಕೆಯಲ್ಲಿ ಕಾರ್ಯಕ್ರಮ ಆರಂಭವಾಗಿದೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2023, 7:46 IST
Last Updated 2 ಡಿಸೆಂಬರ್ 2023, 7:46 IST
<div class="paragraphs"><p>ಬಾಲ್ಕಿಯಲ್ಲಿ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಆರಂಭ</p></div>

ಬಾಲ್ಕಿಯಲ್ಲಿ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಆರಂಭ

   

ಭಾಲ್ಕಿ (ಬೀದರ್): ಮಾಜಿ ಸಚಿವ ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆರಂಭವಾಗಿದೆ.

ಪಟ್ಟಣದ ಬಿಕೆಐಟಿ ಕಾಲೇಜಿನ ಆವರಣದಲ್ಲಿ ಬೃಹತ್ ವೇದಿಕೆಯಲ್ಲಿ ಕಾರ್ಯಕ್ರಮ ಆರಂಭವಾಗಿದೆ. ಭೀಮಣ್ಣ ಖಂಡ್ರೆಯವರು ಈಗಾಗಲೇ ವೇದಿಕೆಗೆ ಬಂದಿದ್ದು, ಕುಟುಂಬ ಸದಸ್ಯರು ಆರತಿ ಬೆಳಗುತ್ತಿದ್ದಾರೆ. ಸುತ್ತೂರು, ತುಮಕೂರು, ಸಿರಿಗೆರೆ ಸೇರಿದಂತೆ ರಾಜ್ಯದ ಹಲವು ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ADVERTISEMENT

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,

ಮಾಜಿ ಮುಖ್ಯಮಂತ್ರಿಗಳಾದ ಸುಶೀಲಕುಮಾರ ಶಿಂದೆ, ಜಗದೀಶ ಶೆಟ್ಟರ್, ಸಚಿವರಾದ ಈಶ್ವರ ಖಂಡ್ರೆ, ರಹೀಂಖಾನ್, ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇನ್ನಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕಿದೆ. ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಖಂಡ್ರೆ ಹಿತೈಶಿಗಳು ಆಗಮಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.