ADVERTISEMENT

ಹುಲಸೂರ : ವಿವಿಧೆಡೆ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2023, 13:23 IST
Last Updated 6 ಡಿಸೆಂಬರ್ 2023, 13:23 IST
ತಾಲ್ಲೂಕ ಪಂಚಾಯಿತಿಯಲ್ಲಿ ನರೇಗಾ ಸಹಾಯಕ ನಿರ್ದೇಶಕ ಮಹದೇವ ಜಮ್ಮು ಅವರು ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು
ತಾಲ್ಲೂಕ ಪಂಚಾಯಿತಿಯಲ್ಲಿ ನರೇಗಾ ಸಹಾಯಕ ನಿರ್ದೇಶಕ ಮಹದೇವ ಜಮ್ಮು ಅವರು ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು   

ಹುಲಸೂರ: ಪಟ್ಟಣ ಸೇರಿ ತಾಲ್ಲೂಕಿನ ವಿವಿಧೆಡೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಆಚರಣೆ ಮಾಡಲಾಯಿತು. ತಾಲ್ಲೂಕು ಪಂಚಾಯಿತಿಯಲ್ಲಿ ನರೇಗಾ ಸಹಾಯಕ ನಿರ್ದೇಶಕ ಮಹದೇವ ಜಮ್ಮು ಅವರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ನಮಗೆ ಸ್ವಾಭಿಮಾನ ತಂದುಕೊಟ್ಟಿರುವ ಡಾ.ಅಂಬೇಡ್ಕರ್ ಅವರಿಗೆ ಕೇವಲ ಪೂಜೆ ಸಲ್ಲಿಸಿದರೆ ಸಾಲದು. ನಾವು ಅವರ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಇಂದು ಆಚರಿಸುತ್ತಿರುವ ಮಹಾಪರಿನಿರ್ವಾಣ ದಿನಾಚರಣೆಗೆ ಅರ್ಥ ಬರುತ್ತದೆ ಎಂದರು.

ತಾಲ್ಲೂಕಿನ ಸಮೀಪದ ಮುಚಳoಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ನಿಮಿತ್ತ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂದೀಪ ಬಿರಾದಾರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಪೂಜೆ ಸಲ್ಲಿಸಿದರು

ADVERTISEMENT
ಮುಚಳoಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ನಿಮಿತ್ತ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಗ್ರಾಮ ಪಂಚಾಯಿತಿ ಅಭವೃದ್ಧಿ ಅಧಿಕಾರಿ ಸಂದೀಪ ಬಿರಾದಾರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಪೂಜೆ ಸಲ್ಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.