ADVERTISEMENT

ಬೀದರ್ | ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ವರ್ಗಾವಣೆ: ಶಿಲ್ಪಾ ಶರ್ಮಾ ನೂತನ ಡಿಸಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 2:36 IST
Last Updated 5 ಜುಲೈ 2024, 2:36 IST
<div class="paragraphs"><p>ಶಿಲ್ಪಾ ಶರ್ಮಾ </p></div>

ಶಿಲ್ಪಾ ಶರ್ಮಾ

   

ಬೀದರ್: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದ್ದು, ಅವರ ಜಾಗಕ್ಕೆ ಐಎಎಸ್ ಅಧಿಕಾರಿ ಶಿಲ್ಪಾ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.

ಗೋವಿಂದ ರೆಡ್ಡಿ ಅವರನ್ನು ಗದಗ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಬೀದರ್ ಡಿಸಿಯಾಗಿ ನಿಯೋಜನೆಗೊಂಡಿರುವ ಶಿಲ್ಪಾ ಶರ್ಮಾ ಅವರು ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದರು.

ADVERTISEMENT

ಎರಡು ದಿನಗಳ ಹಿಂದೆ ಎಸ್ಪಿ ಚನ್ನಬಸವಣ್ಣ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿತ್ತು. ಇದರ ಬೆನ್ನಲ್ಲೇ ಡಿಸಿ ವರ್ಗಾವಣೆ ಮಾಡಿದೆ.

ಗೋವಿಂದ ರೆಡ್ಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.