ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ. ಶೈಲೇಂದ್ರ ಬೆಲ್ದಾಳೆ ಸೋಮವಾರ (ಏ.17) ನಾಮಪತ್ರ ಸಲ್ಲಿಸಲಿದ್ದಾರೆ.
ಅಂದು ಬೆಳಿಗ್ಗೆ 10ಕ್ಕೆ ಪ್ರತಾಪನಗರದ ಬೆಲ್ದಾಳೆ ಕನ್ವೆನ್ಶನ್ ಹಾಲ್‍ನ ಗೃಹ ಕಚೇರಿಯಿಂದ ಕೆಇಬಿ ಹನುಮಾನ ಮಂದಿರ, ಹರಳಯ್ಯ ವೃತ್ತ, ಕರ್ನಾಟಕ ಬ್ಯಾಂಕ್, ತಿರುಮಲಾ ಮೆಡಿಕಲ್, ಅಂಬೇಡ್ಕರ್ ವೃತ್ತ, ಭಗತ್‍ಸಿಂಗ್ ವೃತ್ತ, ತಹಶೀಲ್ದಾರ್ ಕಚೇರಿ ಮಾರ್ಗವಾಗಿ ಪಾದಯಾತ್ರೆಯಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಲಾಗುವುದು ಎಂದು ಡಾ. ಶೈಲೇಂದ್ರ ಬೆಲ್ದಾಳೆ ತಿಳಿಸಿದ್ದಾರೆ.
ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.