ಬೀದರ್: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ
ಹನ್ನೊಂದನೆಯ ಘಟಿಕೋತ್ಸವ ಜ.17ರಂದು ಮಧ್ಯಾಹ್ನ 3 ಗಂಟೆಗೆ ವಿಶ್ವವಿದ್ಯಾಲಯದ ಕೇಂದ್ರ ಸ್ಥಾನದಲ್ಲಿ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಡಾ.ಎಚ್.ಡಿ.ನಾರಾಯಣ ಸ್ವಾಮಿ ತಿಳಿಸಿದರು.
ಕೇಂದ್ರ ಕೃಷಿ ಮತ್ತು ರೈತ ಕ್ಷೇಮಾಭಿವೃದ್ಧಿ ಸಚಿವಾಲಯದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶೋಕ ದಳವಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಶ್ವವಿದ್ಯಾಲಯದ ಸಹ ಕುಲಾಧಿಪತಿಯಾದ ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.
662 ಸ್ನಾತಕ ಪದವಿಧರರು, 122 ಸ್ನಾತಕೋತ್ತರ ಹಾಗೂ 37 ಡಾಕ್ಟರೇಟ್ ಪದವಿಧರರಿಗೆ ಪ್ರಮಾಣಪತ್ರ ಪ್ರದಾನ ಮಾಡಲಾಗುವುದು. ಘಟಿಕೋತ್ಸವದ ದಿನ 312 ಪದವೀಧರರು ಉಪಸ್ಥಿತರಾಗಿ ಪದವಿ ಪಡೆಯಲಿದ್ದಾರೆ. 2018–2019ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ 44 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.