ಬೀದರ್: ರೈತರ ಪಹಣಿಗಳಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ನಮೂದಾಗಿರುವುದನ್ನು ತೆಗೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು.
‘ವಕ್ಫ್ ಹಟಾವೋ, ಕಿಸಾನ್ ಬಚಾವೋ’ ಘೋಷವಾಕ್ಯದಡಿ ರೈತ ಸಂಘ ಕರೆ ಕೊಟ್ಟಿದ್ದ ಪ್ರತಿಭಟನೆಯನ್ನು ಬೆಂಬಲಿಸಿ ಬಿಜೆಪಿ, ಶ್ರೀರಾಮ ಸೇನೆ, ಹಿಂದೂ ಬ್ರಿಗೇಡ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಜಿಲ್ಲೆಯ ವಿವಿಧ ಭಾಗದ ಸ್ವಾಮೀಜಿಗಳು ಕೂಡ ಭಾಗವಹಿಸಿ ಬೆಂಬಲ ಸೂಚಿಸಿದರು. ತಾಲ್ಲೂಕಿನ ಚಟ್ನಳ್ಳಿ, ಧರ್ಮಾಪುರ ಸೇರಿದಂತೆ ಇತರೆ ಹಳ್ಳಿಗಳ ಗ್ರಾಮಸ್ಥರು ಕೂಡ ಭಾಗವಹಿಸಿದ್ದರು.
ನಗರದ ಗಣೇಶ ಮೈದಾನದಿಂದ ಆರಂಭಗೊಂಡ ಪ್ರತಿಭಟನಾ ರ್‍ಯಾಲಿ ನಗರದ ಪ್ರಮುಖ ಮಾರ್ಗಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಮಾರ್ಗದುದ್ದಕ್ಕೂ ದಿಕ್ಕಾರ, ದಿಕ್ಕಾರ ಸರ್ಕಾರಕ್ಕೆ ದಿಕ್ಕಾರ, ‘ವಕ್ಫ್ ಹಟಾವೋ, ಕಿಸಾನ್ ಬಚಾವೋ’ ಎಂದು ಘೋಷಣೆಗಳನ್ನು ಹಾಕಿದರು. ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಕೆಲಸಮಯ ರಸ್ತೆತಡೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಪ್ರವೇಶ ದ್ವಾರದ ಮಗ್ಗುಲಲ್ಲಿರುವ ಪಾದಚಾರಿ ಮಾರ್ಗ ಹಾಗೂ ರಸ್ತೆಯ ಒಂದು ಭಾಗದಲ್ಲಿ ಕುಳಿತು ಧರಣಿ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ಜಿಲ್ಲೆಯ ರೈತರ ಪಹಣಿಯಲ್ಲಿ ವಕ್ಫ್ ಮಂಡಳಿ ಆಸ್ತಿ ಎಂದು ನಮೂದಾಗಿದೆ. ಸರ್ಕಾರ ರೈತ ವಿರೋಧಿ ಎಂದು ತೋರಿಸಿಕೊಟ್ಟಿದೆ. ರೈತರಿಗೆ ಕೊಟ್ಟಿರುವ ನೋಟಿಸ್ ಹಿಂಪಡೆಯಲು ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ. ಆದರೆ, ಪಹಣಿಯಿಂದ ವಕ್ಫ್ ಮಂಡಳಿ ಆಸ್ತಿ ಎಂದು ತೆಗೆಸಿಲ್ಲ. ಕೂಡಲೇ ಅದನ್ನು ತೆಗೆಸಬೇಕು ಎಂದು ಒತ್ತಾಯಿಸಿದರು.
ರೈತರ ಪಹಣಿಯಿಂದ ಎಲ್ಲಿಯವರೆಗೆ ವಕ್ಫ್ ಬೋರ್ಡ್ ಆಸ್ತಿ ಎಂದು ಬರೆದಿರುವುದು ತೆಗೆಯುವುದಿಲ್ಲವೋ ಅಲ್ಲಿಯ ವರೆಗೆ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.
ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ, ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ, ಜಿಲ್ಲಾ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ, ಉಪಾಧ್ಯಕ್ಷ ಶಂಕರೆಪ್ಪ ಪಾರಾ, ರಾಜ್ಯ ಪ್ರತಿನಿಧಿ ಚಂದ್ರಶೇಖರ ಜಮಖಂಡಿ, ಭಾಲ್ಕಿ ತಾಲ್ಲೂಕು ಅಧ್ಯಕ್ಷ ಬಾಬುರಾವ್ ಜೋಳದಾಬಕೆ, ಕಮಲನಗರ ತಾಲ್ಲೂಕು ಅಧ್ಯಕ್ಷ ಪ್ರವೀಣ ಕುಲಕರ್ಣಿ, ಬೀದರ್ ತಾಲ್ಲೂಕು ಅಧ್ಯಕ್ಷ ನಾಗಯ್ಯ ಸ್ವಾಮಿ, ಔರಾದ್ ತಾಲ್ಲೂಕು ಅಧ್ಯಕ್ಷ ಪ್ರಕಾಶ ಬಾವಗೆ, ಮುಖಂಡರಾದ ಭಾಗ್ಯಶ್ರೀ ದೇಶಮುಖ, ರೇವಣಸಿದ್ದಪ್ಪ ಯರಬಾಗ್, ವಿಠಲ ಪಾಟೀಲ, ಮಲ್ಲಿಕಾರ್ಜುನ ಚಕ್ಕಿ, ವಿಶ್ವನಾಥ ಧರಣಿ, ಮಲ್ಲಿಕಾರ್ಜುನ ಬಿರಾದಾರ, ರಾಜಕುಮಾರ ಪಾಟೀಲ, ಬಸಪ್ಪ ಆಲೂರೆ, ಝರಣಪ್ಪ ದೇಶಮುಖ, ರವಿ ದೀವರೆ, ಕೃಷ್ಣ ರೆಡ್ಡಿ, ಬಿಜೆಪಿ ಮುಖಂಡರಾದ ಈಶ್ವರ ಸಿಂಗ್ ಠಾಕೂರ್, ಮಹೇಶ್ವರ ಸ್ವಾಮಿ,
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.