ADVERTISEMENT

ಬೀದರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಪರ ಅಲೆ: ಸಚಿವ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2024, 16:35 IST
Last Updated 29 ಏಪ್ರಿಲ್ 2024, 16:35 IST
ಭಾಲ್ಕಿಯಲ್ಲಿ ಸಚಿವ ಈಶ್ವರ ಖಂಡ್ರೆ ಬಿಜೆಪಿಯ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು
ಭಾಲ್ಕಿಯಲ್ಲಿ ಸಚಿವ ಈಶ್ವರ ಖಂಡ್ರೆ ಬಿಜೆಪಿಯ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು   

ಭಾಲ್ಕಿ: ಪಟ್ಟಣದಲ್ಲಿ ಸೋಮವಾರ ತಾಲ್ಲೂಕಿನ ಬೀರಿ(ಬಿ), ಹುಣಜಿ ಗ್ರಾಮಗಳ ಬಿಜೆಪಿ ಕಾರ್ಯಕರ್ತರು ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.

ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಬಾವುಟ ಮತ್ತು ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ನಂತರ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆಯಲ್ಲಿ ರಾಜ್ಯದಾದ್ಯಂತ ಕಾಂಗ್ರೆಸ್ ಪರ ಅಲೆ ಇದ್ದು, ಬೀದರ್ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ವಿರೋಧಿ ಅಲೆ ಇದೆ. ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಕಿರಿಯ ವಯಸ್ಸಿನ ಅಭ್ಯರ್ಥಿ ಸಾಗರ್ ಖಂಡ್ರೆ ಅವರನ್ನು ಗೆಲ್ಲಿಸಿ ಕ್ಷೇತ್ರದ ಜನರು ಹೊಸ ಇತಿಹಾಸ ಬರೆಯಲಿದ್ದಾರೆ’ ಎಂದರು.

‘ಬದಲಾವಣೆ ಜಗದ ನಿಯಮ, ಈ ಬಾರಿ ಬೀದರ್ ಬದಲಾವಣೆ ಬಯಸುತ್ತಿದ್ದು, ದರ್ಪ, ದುರಹಂಕಾರದಿಂದ ವರ್ತಿಸುತ್ತಿರುವ ಸಂಸದರನ್ನು ತಿರಸ್ಕರಿಸಿ, ಕಾಂಗ್ರೆಸ್ ಪಕ್ಷದ ಬಗ್ಗೆ ಜನರು ಒಲವು ತೋರುತ್ತಿದ್ದಾರೆ’ ಎಂದು ಹೇಳಿದರು. ವಿಜಯಕುಮಾರ ಬಿರಾದಾರ, ಜ್ಞಾನೇಶ್ವರ ಬಿರಾದಾರ, ದಿಲೀಪ ಸಾವರೆ ಸೇರಿದಂತೆ ಇತರರು ಹಾಜರಿದ್ದರು.

ADVERTISEMENT
ಭಾಲ್ಕಿಯಲ್ಲಿ ಸಚಿವ ಈಶ್ವರ ಖಂಡ್ರೆ ಬಿಜೆಪಿಯ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.