ADVERTISEMENT

ಬಸವಕಲ್ಯಾಣದಲ್ಲಿ ರಕ್ತನಿಧಿ ಕೇಂದ್ರ: ಎಚ್‍ಆರ್‍ಎಸ್ ಮನವಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2022, 14:52 IST
Last Updated 19 ಜನವರಿ 2022, 14:52 IST
ಬಸವಕಲ್ಯಾಣದಲ್ಲಿ ರಕ್ತನಿಧಿ ಕೇಂದ್ರ ಆರಂಭಿಸುವಂತೆ ಹ್ಯುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ ಪ್ರತಿನಿಧಿಗಳು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಬಸವಕಲ್ಯಾಣದಲ್ಲಿ ರಕ್ತನಿಧಿ ಕೇಂದ್ರ ಆರಂಭಿಸುವಂತೆ ಹ್ಯುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ ಪ್ರತಿನಿಧಿಗಳು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್: ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ಹೆಸರಲ್ಲಿ ರಕ್ತನಿಧಿ ಕೇಂದ್ರ ಸ್ಥಾಪಿಸಬೇಕು ಎಂದು ಹ್ಯುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ ಮನವಿ ಮಾಡಿದೆ.

ಸೊಸೈಟಿಯ ಮುಖ್ಯಸ್ಥ ಮಹಮ್ಮದ್ ಶೋಯೇಬ್, ಝಾಕೀರ್ ಹಾಗೂ ಬಸವಕಲ್ಯಾಣದ ಮುಖ್ಯಸ್ಥ ಶೇಕ್ ಕರ್ರಾರ್ ಅಹಮ್ಮದ್ ಅವರು ಈ ಕುರಿತು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಘಾತ ಸಂಭವಿಸಿ, ರಕ್ತದ ಅವಶ್ಯಕತೆ ಉಂಟಾದರೆ 80 ಕಿ.ಮೀ. ದೂರದ ಬೀದರ್ ಇಲ್ಲವೇ ಮಹಾರಾಷ್ಟ್ರದ ಸೋಲಾಪುರಕ್ಕೆ ತೆರಳಬೇಕಾಗಿದೆ ಎಂದು ತಿಳಿಸಿದರು.

ADVERTISEMENT

ಧರ್ಮಸಿಂಗ್ ಫೌಂಡೇಷನ್ ಇಲ್ಲವೇ ಸರ್ಕಾರದ ವತಿಯಿಂದ ರಕ್ತನಿಧಿ ಕೇಂದ್ರ ಆರಂಭಿಸಲು ಪ್ರಯತ್ನಿಸಬೇಕು ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.