ADVERTISEMENT

ಜಾತಿ ನಿಂದನೆ: ಆರು ವಾರಗಳಲ್ಲಿ ವರದಿ ಸಲ್ಲಿಕೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2023, 8:45 IST
Last Updated 11 ಡಿಸೆಂಬರ್ 2023, 8:45 IST

ಹುಮನಾಬಾದ್: ಇಲ್ಲಿನ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ವಾರಗಳಲ್ಲಿ ತನಿಖೆ ನಡೆಸಿ ಅಫಿಡೇವಿಟ್‌ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪೊಲೀಸರಿಗೆ ಆದೇಶಿಸಿದೆ.

ಬಸವತೀರ್ಥ ಮಠದ ಸ್ವಾಮೀಜಿ ಸೇರಿ ಇತರರ ವಿರುದ್ಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಫೆ.18ರಂದು ಪ್ರಕರಣ ದಾಖಲಾಗಿತ್ತು. ಕಲಬುರಗಿ ಹೈಕೋರ್ಟ್ ಮೂಲಕ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ವಿರುದ್ಧ ಸ್ವಾಮೀಜಿ ತನಿಖೆಗೆ ತಡೆಯಾಜ್ಞೆ ತಂದಿದ್ದರು. ಕಲಬುರಗಿ ಹೈಕೋರ್ಟ್ ಆದೇಶದ ನಂತರ ಅರ್ಜಿದಾರ ಸೋಮ್ಲಾ ಪವಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ಪರಿಶೀಲನೆ ನಡೆಸಿದೆ. ಈ ಅರ್ಜಿ ವಿಚಾರಣೆಯನ್ನು 2024ರ ಜನವರಿ ಮೂರನೇ ವಾರದಲ್ಲಿ ಪಟ್ಟಿ ಮಾಡುವಂತೆ ಆದೇಶಿಸಿದೆ. ಅಲ್ಲದೇ, ಸ್ವಾಮೀಜಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತಿಗೆ ಒಳಪಟ್ಟು ಪೊಲೀಸರು ಅವರನ್ನು ಬಂಧಿಸಬಾರದು ಎಂದೂ ಆದೇಶದಲ್ಲಿ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.