ADVERTISEMENT

ಅಂಬಿಗರ ಚೌಡಯ್ಯ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 15:53 IST
Last Updated 21 ಜನವರಿ 2021, 15:53 IST
ಬೀದರ್‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಅವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಉದ್ಘಾಟಿಸಿದರು
ಬೀದರ್‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಅವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಉದ್ಘಾಟಿಸಿದರು   

ಬೀದರ್: ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಗುರುವಾರ ಅಂಬಿಗರ ಚೌಡಯ್ಯ ಅವರ ಜಯಂತಿ ಆಚರಿಸಲಾಯಿತು.

ಚೌಡಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಗೌರವಿಸಲಾಯಿತು. ಪಕ್ಷದ ನಗರ ಘಟಕದ ಅಧ್ಯಕ್ಷ ಹಣಮಂತ ಬುಳ್ಳಾ, ಪ್ರಧಾನ ಕಾರ್ಯದರ್ಶಿ ಸುನೀಲ್ ಗೌಳಿ, ಜಿಲ್ಲಾ ಎಸ್.ಟಿ. ಮೋರ್ಚಾ ಉಪಾಧ್ಯಕ್ಷರಾದ ರಾಜಕುಮಾರ ಬಿರಾದಾರ, ರವೀಂದ್ರ ಬಾಳೆಬಾಯಿ, ಖಜಾಂಚಿ ದೀಪಕ ಚಿದ್ರಿ, ನಗರ ಮೋರ್ಚಾ ಪ್ರಧಾನ ಕಾರ್ಯದರ್ಶಿಅವಿನಾಶ ಬರಿದಾಬಾದೆ, ಕಿಶನ್ ಜಮಾದಾರ್ ಇದ್ದರು. ಬಿಜೆಪಿ ನಗರ ಘಟಕ ಹಾಗೂ ಎಸ್.ಟಿ. ಮೋರ್ಚಾ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಿಲ್ಲಾಧಿಕಾರಿ ಕಚೇರಿ:
ಬೀದರ್ ಜಿಲ್ಲಾಡಳಿತದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರು ನಿಜಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಿದರು. ಲೇಖಕಿ ಪಾರ್ವತಿ ಸೋನಾರೆ, ಮುಖಂಡರಾದ ಮಾರುತಿ ಮಾಸ್ಟರ್ ಮಾತನಾಡಿದರು.

ADVERTISEMENT

ಕರ್ನಾಟಕ ಜಾನಪದ ಅಕಾಡೆಮಿಯ ರಾಜ್ಯ ಸಮಿತಿಯ ಮಾಜಿ ಸದಸ್ಯ ವಿಜಯಕುಮಾರ ಸೋನಾರೆ, ಕನ್ನಡ ಜಾಗೃತ ಸಮಿತಿಯ ಸದಸ್ಯರಾದ ಎಂ.ಪಿ.ಮುದಾಳೆ, ಸಮಾಜದ ಮುಖಂಡರಾದ ನಂದಕುಮಾರ ಜಂಬಗಿಕರ್, ಸತ್ಯಪ್ರಕಾಶ ಕೋಳಿ, ಸುನೀಲ ಖಾಶೆಂಪೂರ, ಷಣ್ಮುಖಪ್ಪ ಶೇಖಾಪೂರ, ಶರಣಪ್ಪ ಖಾಶೆಂಪೂರ ಇದ್ದರು. ಅಂಬಿಗರ ಚೌಡಯ್ಯ ಯುವ ಸೇನೆಯ ಮುಖಂಡ ಸುನೀಲ ಭಾವಿಕಟ್ಟಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.