ADVERTISEMENT

ಬೀದರ್‌: ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಸಿಇಒ ಚಾಲನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 15:26 IST
Last Updated 15 ಜೂನ್ 2024, 15:26 IST
ಬೀದರ್‌ನ ನೌಬಾದ್‍ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್‌ ಬದೋಲೆ ಶನಿವಾರ ಚಾಲನೆ ನೀಡಿದರು
ಬೀದರ್‌ನ ನೌಬಾದ್‍ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್‌ ಬದೋಲೆ ಶನಿವಾರ ಚಾಲನೆ ನೀಡಿದರು    

ಬೀದರ್‌: ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗಿರೀಶ್‌ ಬದೋಲೆ ಇಲ್ಲಿನ ನೌಬಾದ್‌ ರೈತ ಸಂಪರ್ಕ ಕೇಂದ್ರದಲ್ಲಿ ಶನಿವಾರ ಚಾಲನೆ ನೀಡಿದರು.

ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಸೋಯಾಬೀನ್, ತೊಗರಿ, ಉದ್ದು, ಹೆಸರು ಸೇರಿದಂತೆ ಇತರೆ ಬೀಜಗಳನ್ನು ವಿತರಿಸಲಾಗುತ್ತಿದ್ದು, ರೈತರು ಇದರ ಲಾಭ ಪಡೆಯಬೇಕು ಎಂದು ಹೇಳಿದರು.

ರೈತರಿಗೆ ಗುಣಮಟ್ಟದ ಅಗತ್ಯ ಬೀಜಗಳನ್ನು ಸರಿಯಾದ ಸಮಯಕ್ಕೆ ವಿತರಿಸಬೇಕು. ಅಗತ್ಯ ಬೀಜ ದಾಸ್ತಾನು ಇಡಬೇಕು. ಯಾವುದೇ ಬೀಜದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ADVERTISEMENT

ಮುಂಗಾರು ಹಂಗಾಮಿನಲ್ಲಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ನೀಡಬೇಕು. ರೈತರೊಂದಿಗೆ ಸೌಜನ್ಯದೊಂದಿಗೆ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು, ರೈತರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.