ADVERTISEMENT

ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು: ಮೇಹಕರ್ ರಸ್ತೆ ಒತ್ತುವರಿ ತೆರವು

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 15:37 IST
Last Updated 26 ಅಕ್ಟೋಬರ್ 2024, 15:37 IST
ಹುಲಸೂರು ಸಮೀಪದ ಭಾಲ್ಕಿ ತಾಲ್ಲೂಕಿನ ಮೇಹಕರ್‌ನಲ್ಲಿ ಜೆಸಿಬಿ ಯಂತ್ರದಿಂದ ರಸ್ತೆ ಅಗಲೀಕರಣ ಮಾಡುತ್ತಿರುವುದು 
ಹುಲಸೂರು ಸಮೀಪದ ಭಾಲ್ಕಿ ತಾಲ್ಲೂಕಿನ ಮೇಹಕರ್‌ನಲ್ಲಿ ಜೆಸಿಬಿ ಯಂತ್ರದಿಂದ ರಸ್ತೆ ಅಗಲೀಕರಣ ಮಾಡುತ್ತಿರುವುದು    

ಹುಲಸೂರ: ಸಮೀಪದ ಭಾಲ್ಕಿ ತಾಲ್ಲೂಕಿನ ಮೇಹಕರ್ ಗ್ರಾಮದ ಮುಖ್ಯರಸ್ತೆ ಎರಡೂ ಬದಿ ಒತ್ತುವರಿ ಮಾಡಿಕೊಂಡ ಅಂಗಡಿ-ಮುಂಗಟ್ಟು ಹಾಗೂ ಮನೆಗಳನ್ನು ಶುಕ್ರವಾರ ಜೆಸಿಬಿ ಯಂತ್ರದಿಂದ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಪೊಲೀಸ್ ಭದ್ರತೆಯೊಂದಿಗೆ ತೆರವುಗೊಳಿಸಲಾಯಿತು.

ಗ್ರಾಮದ ಜೈ ಹನುಮಾನ ದೇವಸ್ಥಾನದಿಂದ ಮಹಾಕಾಳೇಶ್ವರ ದೇಗುಲವರೆಗೆ 33 ಅಡಿ ರಸ್ತೆ ಅಗಲೀಕರಣ ಮಾಡಲಾಗಿದೆ. ಕೆಲವರ ಆಕ್ಷೇಪ ಹೊರತುಪಡಿಸಿ ಬಹುತೇಕರು ಕಾರ್ಯಾಚರಣೆಗೆ ಸಹಕಾರ ನೀಡಿದರು. ಸುಮಾರು ವರ್ಷದಿಂದ ರಸ್ತೆ ಅತಿಕ್ರಮಣ ಆಗಿದ್ದರಿಂದ ಜನರು ತುಂಬ ಸಂಕಷ್ಟ ಅನುಭವಿಸುತ್ತಿದ್ದರು. ಹಳ್ಳಿಗರ ದೂರಿನ ಮೇರೆಗೆ ಗ್ರಾಪಂ ಅಧ್ಯಕ್ಷೆ ಹಾಗೂ ಸದಸ್ಯರು ಒಮ್ಮತದ ನಿರ್ಣಯ ಕೈಗೊಂಡು ರಸ್ತೆ ಅಗಲೀಕರಣ ಮಾಡುತ್ತಿರುವುದಾಗಿ ಪಿಡಿಒ ಗಣೇಶ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ಶೀತಲ ಸತ್ಯವಾನ ಕಾಂಬಳೆ, ತಾಲ್ಲೂಕು ಪಂಚಾಯಿತಿ ಇಒ ಸೂರ್ಯಕಾಂತ ಬಿರಾದಾರ, ಸಿಪಿಐ ಜಿ.ಎಸ್.ಬಿರಾದಾರ, ಪಿಎಸ್‌ಐಗಳಾದ ಶಿವಕುಮಾರ ಬಳತೆ, ಮಾಣಿಕಪ್ಪ, ಎಎಸ್‌ಐ ಚಂದ್ರಶೇಖರ, ಗ್ರಾ.ಪಂ. ಉಪಾಧ್ಯಕ್ಷ ದಸ್ತಗಿರಿ ಸೇರಿ ಸದಸ್ಯರು ಹಾಗೂ ಗ್ರಾಮದ ಪ್ರಮುಖರು ಹಾಜರಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.