ADVERTISEMENT

ಹಾಲಿನ ದರ ಏರಿಕೆಗೆ ಖಂಡನೆ: ಬೊಬ್ಬೆ ಹೊಡೆದು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2024, 7:37 IST
Last Updated 1 ಜುಲೈ 2024, 7:37 IST
<div class="paragraphs"><p>ಬೊಬ್ಬೆ ಹೊಡೆದು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.</p></div>

ಬೊಬ್ಬೆ ಹೊಡೆದು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.

   

ಬೀದರ್: ಹಾಲಿನ ದರ ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಬೊಬ್ಬೆ ಹೊಡೆದು ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್ ಅವರು ಜಿಲ್ಲಾಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದರು. ಮನವಿ ಸ್ವೀಕಾರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರನ್ನು ಕಳಿಸಿದಾಗ ಬಿಜೆಪಿ ಮುಖಂಡರು ಮನವಿ ಪತ್ರ ಸಲ್ಲಿಸಲು ನಿರಾಕರಿಸಿದರು. ಜಿಲ್ಲಾಧಿಕಾರಿಯೇ ಬಂದು ಮನವಿ ಪತ್ರ ಸ್ವೀಕರಿಸಬೇಕೆಂದು ಆಗ್ರಹಿಸಿದರು. ಜಿಲ್ಲಾಧಿಕಾರಿ ಬರದಿದ್ದಾಗ ಅವರ ಚೇಂಬರ್ ಗೆ ಹೋಗಿ ಘೋಷಣೆಗಳನ್ನು ಕೂಗಿದರು. ಆನಂತರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೊರಬಂದು ಮನವಿ ಸ್ವೀಕರಿಸಿದರು. ಸಚಿವರ ಒತ್ತಡಕ್ಕೆ ಮಣಿದಹ ಮನವಿ ಸ್ವೀಕರಿಸಲು ಬಾರದಿರುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಅಧಿಕಾರಿಗಳೊಂದಿಗೆ ಸಭೆ ನಡೆಯಿತಗತಿದ್ದ ಕಾರಣ ಬರಲಿಲ್ಲ. ಬೇರೇನೂ ಉದ್ದೇಶವಿರಲಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ADVERTISEMENT

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಮುಖಂಡರಾದ ಈಶ್ವರ ಸಿಂಗ್ ಠಾಕೂರ್, ಕಿರಣ್ ಪಾಟೀಲ, ಬಾಬುವಾಲಿ, ಶಶಿಧರ ಹೊಸಳ್ಳಿ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.