ಬೀದರ್: ‘ಹೋರಾಟಗಾರರನ್ನು ಸಮಾಜ ವಿರೋಧಿ ಶಕ್ತಿಗಳೆಂದು ಕರೆದಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರ ಹೇಳಿಕೆ ಖಂಡನಾರ್ಹವಾದುದು’ ಎಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಮತ್ತು ಬೀದರ್ ಸಮಗ್ರ ಅಭಿವೃದ್ಧಿ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ದಿನ ನಗರದ ನೆಹರೂ ಕ್ರೀಡಾಂಗಣದ ಹೊರಭಾಗದಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ, ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಕಾರ್ಮಿಕರ ಜಂಟಿ ಹೋರಾಟ ಬೆಂಬಲಿಸಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯವರು ನಮ್ಮೊಟ್ಟಿಗೆ ಸೇರಿದ್ದರು. ನಮ್ಮ ಸಮಸ್ಯೆ ಬಗೆಹರಿಸಬೇಕು ಎಂದು ಈಶ್ವರ ಖಂಡ್ರೆಯವರಿಗೆ ಮನವಿ ಪತ್ರ ಸಲ್ಲಿಸಲು ಹೋಗಿದ್ದೆವು. ಆದರೆ, ಹೋರಾಟಗಾರರನ್ನು ಖಂಡ್ರೆಯವರು ಸಮಾಜ ವಿರೋಧಿ ಶಕ್ತಿಗಳು ಎಂದು ಕರೆದು ಅವಮಾನಿಸಿದ್ದಾರೆ. ಸ್ವಾಮಿದಾಸ ಕೆಂಪೆನೋರ್ ವಿರುದ್ಧ ಸುಳ್ಳು ಆರೋಪ ಹೊರಿಸಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದು ಎಷ್ಟು ಸರಿ. ಇದು ವ್ಯವಸ್ಥಿತ ಷಡ್ಯಂತ್ರ ಎಂದು ಮಂಗಳವಾರ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.