ಜನವಾಡ: ಬೀದರ್ ತಾಲ್ಲೂಕಿನ ವಿವಿಧೆಡೆ ಮಂಗಳವಾರ ಸಂವಿಧಾನ ದಿನ ಆಚರಿಸಲಾಯಿತು.
ಪಶು ವೈದ್ಯಕೀಯ ಕಾಲೇಜು: ಕಮಠಾಣ ಸಮೀಪದ ಪಶು ವೈದ್ಯಕೀಯ ಕಾಲೇಜಿನಲ್ಲಿ ಕಾಲೇಜು ಡೀನ್ ಡಾ.ಎಂ.ಕೆ. ತಾಂದಳೆ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಡಾ.ಪೃಥ್ವಿರಾಜ್ ಹಾಗೂ ಡಾ. ಪ್ರವೀಣ್ ಸಂವಿಧಾನ ಪೀಠಿಕೆ ಪ್ರತಿಜ್ಞೆ ಮಾಡಿಸಿದರು.
ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಸಿ. ವೀರಣ್ಣ, ವ್ಯವಸ್ಥಾಪಕ ಮಂಡಳಿ ಸದಸ್ಯ ಬಸವರಾಜ ಭತಮುರ್ಗೆ, ಎನ್.ಎಸ್.ಎಸ್. ಸಂಯೋಜಕ ಡಾ. ಚನ್ನಪ್ಪಗೌಡ ಬಿರಾದಾರ, ಡಾ. ಸತೀಶ್ ಬಿರಾದಾರ ಇದ್ದರು.
ಯರನಳ್ಳಿ: ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನದ ನಿಮಿತ್ತ ವಿದ್ಯಾರ್ಥಿಗಳಿಗೆ ಹೋಳಿಗೆ ಊಟ ಕೊಡಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ, ಶಿಕ್ಷಣಾಧಿಕಾರಿ ಝಾಕೀರ್ ಹುಸೇನ್, ಮುಖ್ಯಶಿಕ್ಷಕ ಪಾಂಡುರಂಗ ಬೆಲ್ದಾರ್ ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಇದ್ದರು.
ಹೊನ್ನಿಕೇರಿ: ಗ್ರಾಮದ ಅಮೃತ ಸರೋವರ ಕೆರೆ ದಂಡೆ ಮೇಲೆ ಸಂವಿಧಾನ ದಿನ ಆಚರಿಸಲಾಯಿತು.
ಬೀದರ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಿರಣ ಪಾಟೀಲ, ನರೇಗಾ ಸಹಾಯಕ ನಿರ್ದೇಶಕ ಸುದೇಶ್ ಕೊಡ್ಡೆ, ಪಿಡಿಒ ಧನರಾಜ ವಗ್ಗೆ, ಕವಿತಾ, ಸತ್ಯಜೀತ್ ನಿಡೋದಕರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.