ಬೀದರ್: ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಠ್ಯೇತರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಶಾಸಕ ಬಂಡೆಪ್ಪ ಕಾಶೆಂಪುರ ಆಗ್ರಹಿಸಿದ್ದಾರೆ.
ತಾಲ್ಲೂಕಿನ ಕಮಠಾಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರ್‍ಎಸ್‍ಎಸ್ ಶಿಬಿರ ಆಯೋಜಿಸಿ, ಪಠ್ಯೇತರ ಚಟುವಟಿಕೆಯತ್ತ ಮಕ್ಕಳನ್ನು ಸೆಳೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಹಿಂದೆ ಬೇರೆಡೆ ಶಿಬಿರ ನಡೆಸುತ್ತಿದ್ದ ಆರ್‍ಎಸ್‍ಎಸ್‍ನವರು ಇದೀಗ ಸರ್ಕಾರಿ ಶಾಲೆ ಹಾಗೂ ವಸತಿ ಶಾಲೆಗಳಿಗೂ ಲಗ್ಗೆ ಇಡುತ್ತಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ವಸತಿ ಶಾಲೆಯಲ್ಲಿ ಶಿಬಿರ ಆಯೋಜಿಸಿರುವುದನ್ನು ಖಂಡಿಸಲಾಗುತ್ತದೆ ಎಂದು ಹೇಳಿದ್ದಾರೆ.
ವಸತಿ ಶಾಲೆಯಲ್ಲಿ ಶಿಬಿರಕ್ಕೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಸ್ಥಳ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಬಿರ ನಡೆಸಲು ಅವಕಾಶ ಕೊಡಬಾರದು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.