ಹುಮನಾಬಾದ್: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ದಲಿತರ ದಿನಾಚರಣೆ ನಡೆಯಿತು.
ಡಿವೈಎಸ್ಪಿ ಎಸ್.ಬಿ.ಮಹೇಶ್ವರಪ್ಪ ಮಾತನಾಡಿ,‘ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟುವ ಉದ್ದೇಶದಿಂದ ಪ್ರತಿ ತಿಂಗಳು ಎರಡನೇ ಭಾನುವಾರ ದಲಿತರ ದಿನಾಚರಣೆ ಆಚರಿಸುವ ಮೂಲಕ ಕುಂದು ಕೊರತೆಗಳನ್ನು ಆಲಿಸಲಾಗುತ್ತಿದೆ’ ಎಂದರು.
ಎಲ್ಲ ಗ್ರಾಮಗಳಲ್ಲಿ ಸೌಹಾರ್ದತೆಯಿಂದ ಬದುಕಬೇಕು. ಜಾತಿ ನಿಂದನೆ ಮಾಡಿದರೆ, ದಲಿತ ಸಮುದಾಯದವರು ದೂರು ನೀಡಬೇಕು ಎಂದು ತಿಳಿಸಿದರು.
ಸಿಪಿಐ ಜೆ.ಎಸ್.ನ್ಯಾಮಗೌಡರು ಮಾತನಾಡಿ,‘ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸದಿದ್ದರೆ, ಮೇಲಾಧಿಕಾರಿಗಳ ಗಮನಕ್ಕೆ ತರಬೇಕು’ ಎಂದರು.
ಪಿಎಸ್‍ಐ ರವಿಕುಮಾರ ಮಾತನಾಡಿ ದೌರ್ಜನ್ಯ ತಡೆ ಕಾಯ್ದೆ ಕುರಿತು ತಿಳಿಸಿದರು.
ಹಿರಿಯ ಸಾಮಾಜಿಕ ಕಾರ್ಯಕರ್ತ ಸುಭಾಷ ಆರ್ಯ, ದಲಿತ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ವೀರಪ್ಪ ಧುಮನಸೂರ, ಭೀಮ್ ಆರ್ಮಿ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ದೊಡ್ಡಿ, ದಲಿತ ಸಂಘಟನೆ ಯುವ ಮುಖಂಡ ಲಕ್ಷ್ಮಿಪುತ್ರ ಮಾಳಗೆ, ಸುರೇಶ ಘಾಂಗ್ರೆ, ಬಾಬುರಾವ ಜಾನವೀರ, ಸುರೇಶಕುಮಾರ, ವಿಜಯಕುಮಾರ ಜಂಜೀರ, ರಾಹುಲ ಜಾನವೀರ ಹಾಗೂ ಸತೀಶ ಪಾಂಡೆ ಮೊಳಕೇರಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.