ADVERTISEMENT

ಔರಾದ್: ರಸ್ತೆ ದುರಸ್ತಿಗೆ ದಲಿತ ಸಂಘರ್ಷ ಸಮಿತಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 14:36 IST
Last Updated 30 ಜುಲೈ 2024, 14:36 IST
ಹಾಳಾದ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರಮುಖರು ಉಪ ತಹಶೀಲ್ದಾರ್ ವೆಂಕಟೇಶ ಅವರಿಗೆ ಮನವಿ ಸಲ್ಲಿಸಿದರು
ಹಾಳಾದ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರಮುಖರು ಉಪ ತಹಶೀಲ್ದಾರ್ ವೆಂಕಟೇಶ ಅವರಿಗೆ ಮನವಿ ಸಲ್ಲಿಸಿದರು   

ಔರಾದ್: ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ವಿವಿಧ ರಸ್ತೆಗಳು ಹಾಳಾಗಿರುವುದರಿಂದ ಕೂಡಲೇ ಆ ರಸ್ತೆ ದುರಸ್ತಿ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

‌ಸಮಿತಿ ತಾಲ್ಲೂಕು ಸಂಚಾಲಕ ಸುಭಾಷ ಲಾಧಾ, ಗಣಪತರಾವ ಶೆಂಬೆಳ್ಳಿ, ದತ್ತಾತ್ರಿ ಅವರು ಸೋಮವಾರ ಉಪ ತಹಶೀಲ್ದಾರ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದರು.

ಕಮಲನಗರ ತಾಲ್ಲೂಕಿನ ಚಿಕ್ಲಿ (ಯು) ಗಡಿಯಿಂದ ದಾಬಕಾ (ಸಿ) ವರೆಗಿನ ರಸ್ತೆ ತೀರಾ ಹದಗೆಟ್ಟಿದೆ. ದೊಡ್ಡ ದೊಡ್ಡ ಗುಂಡಿ ಬಿದ್ದಿವೆ. ಇದರಿಂದ ಗಡಿ ಭಾಗದ ಜನ ಅದರಲ್ಲೂ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ತೀವ್ರ ತೊಂದರೆ ಎದುರಿಸಬೇಕಾಗಿದೆ.

ADVERTISEMENT


ಔರಾದ್-ಭಾಲ್ಕಿ ನಡುವಿನ ಬೆಳಕುಣಿ, ಹಿಪ್ಪಳಗಾಂವ್, ಮಹಾಡೊಣಗಾಂವ್ ರಸ್ತೆ ಸ್ಥಿತಿ ಬಹಳ ಹದಗೆಟ್ಟಿದೆ. ಇಲ್ಲಿ ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಾಗಿದೆ. ಈ ರಸ್ತೆ ಮೇಲೆ ಪ್ರಯಾಣಿಸುವ ಅನೇಕ ಬೈಕ್ ಸವಾರರು ಕೈಕಾಲು ಮುರಿದುಕೊಂಡಿದ್ದಾರೆ.


ಈ ಬಗ್ಗೆ ಸಂಬಂಧಿತ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲವಾದಲ್ಲಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಮನವಿಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.