ADVERTISEMENT

ಖಟಕಚಿಂಚೋಳಿ: ಹೆಸರು ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 15:51 IST
Last Updated 5 ಅಕ್ಟೋಬರ್ 2024, 15:51 IST
ಖಟಕಚಿಂಚೋಳಿ ಗ್ರಾಮದ ಹೆಸರು ಕಾಳು ಖರೀದಿ ಕೇಂದ್ರಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಖಟಕಚಿಂಚೋಳಿ ಗ್ರಾಮದ ಹೆಸರು ಕಾಳು ಖರೀದಿ ಕೇಂದ್ರಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಖಟಕಚಿಂಚೋಳಿ: ಭಾಲ್ಕಿ ತಾಲ್ಲೂಕಿನ ಖಟಕಚಿಂಚೋಳಿ ಗ್ರಾಮದಲ್ಲಿ ಪ್ರಾರಂಭಿಸಲಾದ ಹೆಸರು ಕಾಳು ಖರೀದಿ ಕೇಂದ್ರಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಕೇಂದ್ರದಲ್ಲಿ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಉತ್ತಮ ಗುಣಮಟ್ಟದ ಹೆಸರು ಕಾಳನ್ನು ಪ್ರತಿ ಕ್ವಿಂಟಲ್‌ಗೆ ₹8,682ರಂತೆ ಮಾರಾಟ ಮಾಡಬಹುದು’ ಎಂದು ರೈತರಿಗೆ ತಿಳಿಸಿದರು.

ಬಸವಕಲ್ಯಾಣ ಉಪವಿಭಾಗಾಧಿಕಾರಿ ಮುಕುಲ್ ಜೈನ್, ಭಾಲ್ಕಿ ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಶಿವಾನಂದ ಕುಂಬಾರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ಇತರರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.