ADVERTISEMENT

ವೀರಶೈವ ಲಿಂಗಾಯತ ಅಧ್ಯಯನ ಪೀಠ ಸ್ಥಾಪಿಸಿ: ಶಿವಯ್ಯ ಸ್ವಾಮಿ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 4:45 IST
Last Updated 21 ಜೂನ್ 2024, 4:45 IST
ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರಿಗೆ ಕೇಂದ್ರ ಸರ್ಕಾರದ ಸಾಂಸ್ಥಿಕ ಪ್ರಾಣಿ ನೀತಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಮನವಿ ಸಲ್ಲಿಸಿದರು
ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರಿಗೆ ಕೇಂದ್ರ ಸರ್ಕಾರದ ಸಾಂಸ್ಥಿಕ ಪ್ರಾಣಿ ನೀತಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಮನವಿ ಸಲ್ಲಿಸಿದರು    

ಬೀದರ್: ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವೀರಶೈವ ಲಿಂಗಾಯತ ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರದ ಸಾಂಸ್ಥಿಕ ಪ್ರಾಣಿ ನೀತಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ ಆಗ್ರಹಿಸಿದರು.

ಕಲಬುರಗಿಯಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಎಲ್ಲೆಡೆ ವೀರಶೈವ ಲಿಂಗಾಯತ ಸಾಹಿತ್ಯ ಹಾಗೂ ಶಾಸನಗಳು ದೊರೆಯುತ್ತಿವೆ. ವೀರಶೈವ ಲಿಂಗಾಯತದ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನಕ್ಕಾಗಿ ಪೀಠ ಸ್ಥಾಪಿಸುವ ಅಗತ್ಯ ಇದೆ. ಪಂಚ ಪೀಠಗಳು ವೀರಶೈವ ಲಿಂಗಾಯತ ಸಮಾಜದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿವೆ. ಮನುಕುಲಕ್ಕೆ ಪೀಠಗಳ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.

ADVERTISEMENT

ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಆಗಬೇಕು ಎಂಬುದು ಪಂಚ ಪೀಠಗಳ ಜಗದ್ಗುರು ಹಾಗೂ ಸಮಾಜದ ಬಹು ದಿನಗಳ ಬೇಡಿಕೆಯಾಗಿದೆ. ವಿಶ್ವವಿದ್ಯಾಲಯದ ಕಾರ್ಯಕಾರಿಣಿ ಸಮಿತಿಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿದರು. ಅದಕ್ಕೆ ಕುಲಪತಿ ಸಕಾರಾತ್ಮಕವಾಗಿ ಸ್ಪಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.