ಬೀದರ್: ಸ್ವಾಮಿ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಅವರಿಂದ ‘ಜೀವನ ಮೌಲ್ಯಗಳು’ ಕುರಿತ ಉಪನ್ಯಾಸ ಕಾರ್ಯಕ್ರಮ ಏಪ್ರಿಲ್ 2 ರಿಂದ 9ರ ವರೆಗೆ ನಿತ್ಯ ಸಂಜೆ 6 ರಿಂದ ರಾತ್ರಿ 8.30ರ ವರೆಗೆ ಶಿವನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಗೋಶಾಲೆ ಆವರಣದಲ್ಲಿ ನಡೆಯಲಿದೆ.
ಪ್ರವಚನ ಕಾರ್ಯಕ್ರಮದ ಪೂರ್ವ ಸಿದ್ಧತೆಗೆ ಮಾರ್ಚ್ 26ರಂದು ಮಧ್ಯಾಹ್ನ 3 ಗಂಟೆಗೆ ಪ್ರಮುಖರ, ಭಕ್ತರ ಹಾಗೂ ಸ್ವಯಂ ಸೇವಕರ ಸಭೆ ಕರೆಯಲಾಗಿದೆ ಎಂದು ಆಶ್ರಮದ ಜ್ಯೋತಿರ್ಮಯಾನಂದಜಿ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವರ ದಾಸಿಮಯ್ಯ ಜಯಂತಿ ಇಂದು
ಬೀದರ್: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಮಾ. 26 ರಂದು ಬೆಳಿಗ್ಗೆ 11.30ಕ್ಕೆ ದೇವರ ದಾಸಿಮಯ್ಯ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದಕ್ಕೂ ಮುನ್ನ ಬೆಳಿಗ್ಗೆ 9ಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಕಾರ್ಯಕ್ರಮ ಸ್ಥಳ ದವರೆಗೆ ದೇವರ ದಾಸಿಮಯ್ಯ ಅವರ ಭಾವಚಿತ್ರದ ಮೆರವಣಿಗೆ ಜರುಗಲಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಅಮಲಾಪುರೆ ಕೋರಿದ್ದಾರೆ.
ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೀದರ್: ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುವ ರಾಜ್ಯ ಹಾಗೂ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾಮಟ್ಟದ 10 ಪ್ರಶಸ್ತಿ ಹಾಗೂ ರಾಜ್ಯಮಟ್ಟದ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನವಾಗಿದೆ. https://dparar.karnataka.gov.in ಅಥವಾ https://sarvothamawards.karnataka.gov.in ನಲ್ಲಿ ಅರ್ಜಿ ನಮೂನೆ ಪಡೆದು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
* * *
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ
ಬೀದರ್: ನಗರದ ಸಿದ್ಧಾರ್ಥ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಗಳಾಗಿ ಪ್ರಾಚಾರ್ಯ ಗೋಪಾಲ ಬಡಿಗೇರ, ಸುಲೋಚನಾ ಬಿರಾದಾರ ಆಗಮಿಸಿದ್ದರು. ಪ್ರಾಚಾರ್ಯ ಎಸ್. ಪ್ರಭು ಅಧ್ಯಕ್ಷತೆ ವಹಿಸಿದ್ದರು. ಮಮತಾ ಎಂ.ಎಸ್, ಆಸಿಯಾ ಫಿರದೋಸ್ ಇದ್ದರು. ವಿಜಯಕುಮಾರ ನಿರೂಪಿಸಿದರು. ಗೌತಮ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.