ADVERTISEMENT

ವಿದ್ಯಾರ್ಥಿಗಳಿಗೆ ನೋಟ್‍ಪುಸ್ತಕ ವಿತರಣೆ

ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಜನ್ಮದಿನ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 14:11 IST
Last Updated 17 ಡಿಸೆಂಬರ್ 2020, 14:11 IST
ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಜನ್ಮದಿನದ ಪ್ರಯುಕ್ತ ಬೀದರ್‌ನ ಕೆ.ಪಿ. ವಿದ್ಯಾ ಸಂಸ್ಥೆಯಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ವಿದ್ಯಾರ್ಥಿಗಳಿಗೆ ಗುರುವಾರ ನೋಟ್‍ಪುಸ್ತಕ ಹಾಗೂ ಇತರ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿದರು

ಬೀದರ್: ಇಲ್ಲಿಯ ಕೆ.ಪಿ. ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಇತರ ಶೈಕ್ಷಣಿಕ ಸಾಮಗ್ರಿ ವಿತರಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರ ಜನ್ಮದಿನ ಆಚರಿಸಲಾಯಿತು. ಗೋವಿಗೆ ಪೂಜೆ ಸಲ್ಲಿಸಿ, ಕೇಕ್ ಸಹ ಕತ್ತರಿಸಲಾಯಿತು.

ಶೆಟ್ಟರ್ ಅವರ ಜೀವನ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ ಹೇಳಿದರು.

ಶೆಟ್ಟರ್ ಅವರ ಸರಳತೆ ಹಾಗೂ ಸಜ್ಜನಿಕೆ ಮಾದರಿಯಾಗಿದೆ. ಸಂಸ್ಥೆಯಲ್ಲಿ ಪ್ರತಿ ವರ್ಷ ಅವರ ಜನ್ಮದಿನ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷರೂ ಆದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ತಿಳಿಸಿದರು.

ADVERTISEMENT

ಸಂಸ್ಥೆಯ ಉಪಾಧ್ಯಕ್ಷ ಮಲ್ಲಯ್ಯ ಸ್ವಾಮಿ, ಖಜಾಂಚಿ ಸಂಗಶೆಟ್ಟಿ ಹಲಬುರ್ಗೆ, ಸದಸ್ಯ ಚಂದ್ರಶೇಖರ ಪಾಟೀಲ, ಪ್ರೌಢಶಾಲೆ ಮುಖ್ಯ ಶಿಕ್ಷಕ ವಿಜಯಕುಮಾರ ಪಾಟೀಲ ಯರನಳ್ಳಿ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಸುಲೋಚನಾ, ಕಾರ್ಯನಿರ್ವಾಹಕ ಅಧಿಕಾರಿ ಗುರುರಾಜ ಪಾಟೀಲ, ಬಿಜೆಪಿ ಮುಖಂಡರಾದ ಹಣಮಂತ ಬುಳ್ಳಾ, ನಾಗಶೆಟ್ಟಿ ವಗದಾಳೆ, ಸುನೀಲ್ ಗೌಳಿ, ಅನಿಲ್ ರಾಜಗೀರಾ, ಕಲ್ಯಾಣರಾವ್ ಬಿರಾದಾರ, ನಾಗರಾಜ ಹುಲಿ, ಸುನೀಲ್ ದಳವೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.