ADVERTISEMENT

ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2024, 16:33 IST
Last Updated 8 ಏಪ್ರಿಲ್ 2024, 16:33 IST
ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಮಾಜಿ ಶಾಸಕ ರಮೇಶ ಕುಮಾರ್‌ ಪಾಂಡೆ ಅವರನ್ನು ಬಿಜೆಪಿ ವಿಭಾಗ ಪ್ರಮುಖ ಈಶ್ವರ ಸಿಂಗ್‌ ಠಾಕೂರ್‌ ಅವರು ಬೀದರ್‌ನಲ್ಲಿ ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು
ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಮಾಜಿ ಶಾಸಕ ರಮೇಶ ಕುಮಾರ್‌ ಪಾಂಡೆ ಅವರನ್ನು ಬಿಜೆಪಿ ವಿಭಾಗ ಪ್ರಮುಖ ಈಶ್ವರ ಸಿಂಗ್‌ ಠಾಕೂರ್‌ ಅವರು ಬೀದರ್‌ನಲ್ಲಿ ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು   

ಬೀದರ್‌: ಮಾಜಿಶಾಸಕ ರಮೇಶ ಕುಮಾರ್‌ ಪಾಂಡೆ ಅವರು ಅಸ್ವಸ್ಥರಾಗಿದ್ದಾರೆ.

ಇತ್ತೀಚೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು, ಸದ್ಯ ಮನೆಗೆ ತೆರಳಿ, ಮನೆಯಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ.

1999ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್‌ ಮತಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. ಆರಂಭದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯರಾಗಿದ್ದಾರೆ. ವಯಸ್ಸು 88 ಆಗಿದ್ದು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಬಿಜೆಪಿ ವಿಭಾಗ ಪ್ರಮುಖ ಈಶ್ವರ ಸಿಂಗ್‌ ಠಾಕೂರ್‌ ಅವರು ಸೋಮವಾರ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.