ADVERTISEMENT

ರೈತ ಭವನ ದುರಸ್ಥಿ ಮಾಡಿಸಿ: ಶಾಸಕ ಸಿದ್ದಲಿಂಗಪ್ಪ ಪಾಟೀಲಗೆ ಮನವಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2024, 16:28 IST
Last Updated 8 ಜುಲೈ 2024, 16:28 IST
ಹುಮನಾಬಾದ್ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಹುಮನಾಬಾದ್ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು    

ಹುಮನಾಬಾದ್: ಪಟ್ಟಣದಲ್ಲಿನ ಎಪಿಎಂಸಿ ಆವರಣದಲ್ಲಿರುವ ರೈತ ಭವನ ದುರಸ್ಥಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಂತರ ಸಂಘದ ಪ್ರಮುಖರು ಮಾತನಾಡಿ, ‘ಹತ್ತು ವರ್ಷಗಳ ಹಿಂದೆ ರೈತ ಭವನ ನಿರ್ಮಿಸಲಾಗಿದೆ, ಸಮಿತಿಯ ಸದಸ್ಯರು ಹಾಗೂ ಕಾರ್ಯದರ್ಶಿ ಅವರ ನಿರ್ಲಕ್ಷ್ಯದಿಂದಾಗಿ ಭವನ ಒಂದು ಬಾರಿಯೂ ಉಪಯೋಗ ಮಾಡಿಲ್ಲ. ಭವನದ ಸುತ್ತಮುತ್ತ ಗಿಡ ಗಂಟೆಗಳು ಬೆಳೆದಿವೆ. ಈ ಬಗ್ಗೆ ನೀವು ಗಮನ ಹರಿಸಿ ತಾಲ್ಲೂಕಿನ ರೈತರ ಸಭೆ ಸಮಾರಂಭಗಳು ಮಾಡುವುದಕ್ಕೆ ನೀಡಬೇಕು’ ಎಂದರು.

ಬೆಳೆ ಕಟಾವು ಮಾಡುವ ಕೆಲಸಕ್ಕೆ ಕಾರ್ಮಿಕರು ಸಿಗುತ್ತಿಲ್ಲ. ಹೀಗಾಗಿ ನರೇಗಾ ಯೋಜನೆಯ ಕಾರ್ಮಿಕರನ್ನು ಕೃಷಿ ಕೆಲಸಕ್ಕೆ ಬಳಸಿಕೊಳ್ಳುವಂತೆ ಆದೇಶ ಮಾಡಿ ರೈತರಿಗೆ ಅನುಕೂಲ ಮಾಡಬೇಕು’ ಎಂದರು.

ADVERTISEMENT

ಈ ಸಂದರ್ಭದಲ್ಲಿ ಸತೀಶ್ ನನ್ನೂರೆ, ಮಲ್ಲಿಕಾರ್ಜುನ, ಬಸವರಾಜ ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.