ADVERTISEMENT

ಬೀದರ್‌ | 'ಪಿಎಂ ಫಸಲ್‌ ಬಿಮಾ ಯೋಜನೆ ನೋಂದಣಿಗೆ ರೈತರಿಗೆ ಸಲಹೆ'

​ಪ್ರಜಾವಾಣಿ ವಾರ್ತೆ
Published 6 ಜೂನ್ 2024, 5:05 IST
Last Updated 6 ಜೂನ್ 2024, 5:05 IST
ರತೇಂದ್ರನಾಥ ಸುಗೂರ
ರತೇಂದ್ರನಾಥ ಸುಗೂರ   

ಬೀದರ್‌: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಆಸಕ್ತ ರೈತರು ನೋಂದಣಿ ಮಾಡಿಸಿಕೊಳ್ಳಬಹುದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರತೇಂದ್ರನಾಥ ಸುಗೂರ ತಿಳಿಸಿದ್ದಾರೆ.

ತೊಗರಿ, ಸೋಯಾ ಅವರೆ, ಹೆಸರು, ಉದ್ದು, ಮುಸುಕಿನ ಜೋಳ, ಶೇಂಗಾ, ಜೋಳ, ಎಳ್ಳು, ಸಜ್ಜೆ, ಭತ್ತ, ಹತ್ತಿ ಬೆಳೆಗಳನ್ನು ನಿಗದಿಪಡಿಸಲಾಗಿದೆ. ‘ಯುನಿವರ್ಸಲ್ ಸೋಂಪೊ ಜನರಲ್ ಇನ್‌ಶೂರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಸಂಸ್ಥೆಯನ್ನು ನಿಗದಿಪಡಿಸಲಾಗಿದೆ. ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಜುಲೈ 31ರೊಳಗೆ ಹೆಸರು ನೋಂದಾಯಿಸಬೇಕು. ಸೂರ್ಯಕಾಂತಿ ಬೆಳೆಗಾರರು ಬರುವ ಆಗಸ್ಟ್‌ 16ರೊಳಗೆ ಮಾಡಬೇಕು ಎಂದು ಬುಧವಾರ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಬೆಳೆ ಸಾಲ ಪಡೆದ ರೈತರಿಗಾಗಿ ಆಪ್ಟಿಂಗ್‌-ಔಟ್‌ ಮತ್ತು ಆಪ್ಟಿಂಗ್‌-ಇನ್ ಅವಕಾಶ ರೈತರಿಗೆ ನೀಡಲಾಗಿದೆ. ಬೆಳೆಸಾಲ ಪಡೆದ ರೈತರು ಬೆಳೆ ವಿಮೆ ಮಾಡಿಸುವುದು ಐಚ್ಛಿಕವಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ಸ್ಥಳೀಯ ವಾಣಿಜ್ಯ/ಗ್ರಾಮೀಣ/ಸಹಕಾರಿ/ಬ್ಯಾಂಕುಗಳನ್ನು/ಸಾರ್ವಜನಿಕ ಸೇವಾ ಕೇಂದ್ರ ಅಥವಾ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.