ADVERTISEMENT

ಬೀದರ್ ಜಿಎನ್‌ಡಿ ಕಾಲೇಜು: ಹಳೆ ವಿದ್ಯಾರ್ಥಿಗಳ ಸಮಾಗಮ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2024, 15:50 IST
Last Updated 3 ಫೆಬ್ರುವರಿ 2024, 15:50 IST
ಬೀದರ್‌ನ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಗುರುಭವನದಲ್ಲಿ ಶನಿವಾರ ನಡೆದ ಹಳೆ ವಿದ್ಯಾರ್ಥಿಗಳ ಸಮಾಗಮದಲ್ಲಿ ಪಾಲ್ಗೊಂಡಿದ್ದ ಹಳೆಯ ವಿದ್ಯಾರ್ಥಿಗಳು
ಬೀದರ್‌ನ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಗುರುಭವನದಲ್ಲಿ ಶನಿವಾರ ನಡೆದ ಹಳೆ ವಿದ್ಯಾರ್ಥಿಗಳ ಸಮಾಗಮದಲ್ಲಿ ಪಾಲ್ಗೊಂಡಿದ್ದ ಹಳೆಯ ವಿದ್ಯಾರ್ಥಿಗಳು   

ಬೀದರ್: ಇಲ್ಲಿಯ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಗುರುಭವನದಲ್ಲಿ ಶನಿವಾರ ಹಳೆ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮ ನಡೆಯಿತು.

ಹಳೆ ವಿದ್ಯಾರ್ಥಿ ಕರ್ನಲ್‌ ರಾಜೇಶ್ ಜಿಂದಾಲ್ ಮಾತನಾಡಿ, ‘ಕಾಲೇಜಿನಿಂದ ಸುಂದರ ಜೀವನವನ್ನು ಹೇಗೆ ರೂಪಿಸಿಕೋಳ್ಳಬೇಕು ಎಂಬುದನ್ನು ಕಲಿತಿದ್ದೇವೆ. ಹೀಗಾಗಿ ಇಂದು ನಾವೆಲ್ಲರೂ ಬೇರೆ ಬೇರೆ ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತ ನೆಮ್ಮದಿಯ ಜೀವನ ಸಾಗಿಸುತ್ತಿದ್ದೇವೆ’ ಎಂದು ಸ್ಮರಿಸಿದರು.

ನಾನಕ ಝಿರಾ ಸಾಹೇಬ್ ಫೌಂಡೆಷನ್‍ನ ಅಧ್ಯಕ್ಷ ಬಲಬೀರ್‌ ಸಿಂಗ್ ಮತ್ತು ಉಪಾಧ್ಯಕ್ಷೆ ರೇಷ್ಮಾ ಕೌರ್ ಅವರು ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಸರ್ದಾರ್ ಪ್ರೀತಮ್ ಸಿಂಗ್, ಸರ್ದಾರ್ ನೌನಿಹಾಲ್ ಸಿಂಗ್, ಎಂ. ಧನಂಜಯ್ ಪಾಲ್ಗೊಂಡಿದ್ದರು.

ADVERTISEMENT
ಬೀದರ್‌ನ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಗುರುಭವನದಲ್ಲಿ ಶನಿವಾರ ನಡೆದ ಹಳೆ ವಿದ್ಯಾರ್ಥಿಗಳ ಸಮಾಗಮದಲ್ಲಿ ಪಾಲ್ಗೊಂಡಿದ್ದ ಹಳೆಯ ವಿದ್ಯಾರ್ಥಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.