ಬೀದರ್: ಸೇಡಂನ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ವಿದ್ಯಾಭಾರತಿ ಕರ್ನಾಟಕ ರಾಜ್ಯಮಟ್ಟದ ಜ್ಞಾನ ವಿಜ್ಞಾನ ಮೇಳದ ವಿವಿಧ ಸ್ಪರ್ಧೆಗಳಲ್ಲಿ ನಗರದ ಜನಸೇವಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ವಿವಿಧ ಸ್ಪರ್ಧೆಗಳ ವಿವರ ಹೀಗಿದೆ: ಹಿರಿಯ ಪ್ರಾಥಮಿಕ ಶಾಲೆ ವಿಭಾಗದ ವೇದ ಗಣಿತ ರಸಪ್ರಶ್ನೆ ಸ್ಪರ್ಧೆ: ಮಹೇಶ್ವರಿ ಮಹಾದೇವ, ಆಕಾಶ ಜಗನ್ನಾಥ ಮತ್ತು ಮಹಾಂತೇಶ ಶಿವರಾಜ(ಪ್ರಥಮ).
ಪ್ರೌಢಶಾಲಾ ವಿಭಾಗದ ವೇದ ಗಣಿತ ರಸಪ್ರಶ್ನೆ ಸ್ಪರ್ಧೆ: ವಿನೋದ ಹಣಮಂತ, ಸಂದೀಪ ರಾಮಯ್ಯ ಹಾಗೂ ಶಶಿಕಾಂತ ಸಂಗಪ್ಪ(ಪ್ರಥಮ).
ಪ್ರಾಥಮಿಕ ಶಾಲಾ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಸ್ವರ್ಣವೇಣಿ ಭೀಮಸೇನ್(ದ್ವಿತೀಯ).
ಸಂಸ್ಕೃತ ಜ್ಞಾನ ಪರಿಚಯ ರಸಪ್ರಶ್ನೆ ಸ್ಪರ್ಧೆ: ಋತುಜಾ ನಂದಕುಮಾರ, ಧನಲಕ್ಷ್ಮಿ ವೀರಯ್ಯ ಸ್ವಾಮಿ ಮತ್ತು ಗಣೇಶ ಶರಣಪ್ಪ(ತೃತೀಯ).
ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆ ವಿದ್ಯಾರ್ಥಿಗಳು ಅಕ್ಟೋಬರ್ 1, 2ರಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯಲಿರುವ ಪ್ರಾಂತೀಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವರು. ಅಲ್ಲಿ ವಿಜೇತರಾದವರು ರಾಷ್ಟ್ರಮಟ್ಟಕ್ಕೆ ಅರ್ಹತೆ ಪಡೆಯುವರು ಎಂದು ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.
ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಸೋಮವಾರ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ವಿರೂಪಾಕ್ಷ ಸೇಡಂ, ಪ್ರೌಢಶಾಲೆ ಮುಖ್ಯಶಿಕ್ಷಕ ರಾಹುಲ್ ನೆಟ್ಟೆಕರ್, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ನೀಲಮ್ಮ ಚಾಮರೆಡ್ಡಿ, ಶಿಕ್ಷಕರಾದ ಅಮಿತಕುಮಾರ, ಸತೀಶಕುಮಾರ, ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.