ಬೀದರ್: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ನಗರದಲ್ಲಿ ಮಾ. 15 ಮತ್ತು 16 ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಲಿದೆ.
ಕ್ರೀಡಾ ಸ್ಪರ್ಧೆಗಳು ನೆಹರೂ ಕ್ರೀಡಾಂಗಣ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜರುಗಲಿವೆ.
15 ರಂದು ಬೆಳಿಗ್ಗೆ 11 ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕ್ರೀಡಾಕೂಟವನ್ನು ಉದ್ಘಾಟಿಸುವರು. ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಕ್ರೀಡಾ ಜ್ಯೋತಿ ಸ್ವೀಕರಿಸುವರು. ಶಾಸಕ ರಹೀಂಖಾನ್ ಅಧ್ಯಕ್ಷತೆ ವಹಿಸುವರು.
ರಾಜ್ಯ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ ಪಾಟೀಲ, ಬಂಡೆಪ್ಪ ಕಾಶೆಂಪೂರ, ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಶಶೀಲ್ ನಮೋಶಿ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೊದ್ದಿನ್ ಕಚೇರಿವಾಲೆ, ಬಿಡಿಎ ಅಧ್ಯಕ್ಷ ಬಾಬುವಾಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಕಿಶೋರಬಾಬು ವಿಶೇಷ ಆಹ್ವಾನಿತರಾಗಿರುವರು.
ಸಂಜೆ 6ಕ್ಕೆ ರಂಗ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಾಸ್ಯ ಸಂಜೆ ಕಾರ್ಯಕ್ರಮ ನಡೆಯಲಿದೆ. ಜಿ.ಪಂ. ಸಿಇಒ ಜಹೀರಾ ನಸೀಮ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ್, ಬೀದರ್ ಉಪ ವಿಭಾಗಾಧಿಕಾರಿ ಮಹಮ್ಮದ್ ನಯೂಮ್. ಜಿ.ಪಂ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಡಿಎಚ್‍ಒ ಡಾ. ರತಿಕಾಂತ ಸ್ವಾಮಿ, ನಗರ ಅಭಿವೃದ್ಧಿ ಯೋಜನಾ ಕೋಶದ ನಿರ್ದೇಶಕ ಮೋತಿಲಾಲ್ ಲಮಾಣಿ, ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಭಾಗವಹಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಅಧ್ಯಕ್ಷತೆ ವಹಿಸುವರು.
ಅಂತರರಾಷ್ಟ್ರೀಯ ಖ್ಯಾತಿಯ ಮಿಮಿಕ್ರಿ ಗೋಪಿ ಹಾಗೂ ಡಾ. ಬಸವರಾಜ ಬೆಣ್ಣಿ ಹಾಸ್ಯದ ಹೊನಲು ಹರಿಸುವರು. 16 ರಂದು ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಜಿ. ನಾಡಗೀರ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.