ಬೀದರ್: ತಾಲ್ಲೂಕಿನ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದಲ್ಲಿ ಎರಡು ವರ್ಷಗಳ ಕೃಷಿ ಡಿಪ್ಲೊಮಾ ಕೋರ್ಸ್ ಪುನಃ ಆರಂಭಿಸಲು ಕೃಷಿ ಇಲಾಖೆ ಸೋಮವಾರ (ಜು.15) ಅನುಮತಿ ನೀಡಿದೆ.
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 33ನೇ ಸಮನ್ವಯ ಸಮಿತಿ ಸಭೆ ಹಾಗೂ ಏಳನೇ ಪರಿಣತ ಸಮಿತಿ ಸಭೆಯಲ್ಲಿ ಈ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಲಭ್ಯವಿರುವ ಕಟ್ಟಡ, ಮೂಲಸೌಕರ್ಯ ಹಾಗೂ ಬೋಧನಾ ಸಿಬ್ಬಂದಿ ಬಳಸಿಕೊಂಡು 2024–25ನೇ ಸಾಲಿನಲ್ಲಿ ಕೋರ್ಸ್ ಪುನಃ ಆರಂಭಿಸಬೇಕು. ಈ ಸಂಬಂಧ ಸರ್ಕಾರಕ್ಕೆ ಹೆಚ್ಚುವರಿ ಅನುದಾನದ ಪ್ರಸ್ತಾವ ಸಲ್ಲಿಸದೆ ಇರುವ ಷರತ್ತಿಗೆ ಒಳಪಟ್ಟು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕೃಷಿ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.
‘ಕೃಷಿ ಡಿಪ್ಲೊಮಾ ಕೋರ್ಸ್ ಬಂದ್’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ 2023ರ ಜುಲೈ 1ರಂದು ವರದಿ ಪ್ರಕಟಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.