ಸಂಗೊಳಗಿ (ಜನವಾಡ): ಬೀದರ್ ತಾಲ್ಲೂಕಿನ ಸಂಗೊಳಗಿ ಗ್ರಾಮದಲ್ಲಿ ಶುಕ್ರವಾರ ನಡೆದ ಹಮ್ಮಿಕೊಂಡಿದ್ದ ಆರೋಗ್ಯ ಜಾಗೃತಿ ಶಿಬಿರದಲ್ಲಿ 125 ಮಂದಿ ಆರೋಗ್ಯ ಉಚಿತವಾಗಿ ತಪಾಸಣೆ ಮಾಡಲಾಯಿತು.
ರಕ್ತದೊತ್ತಡ, ಮಧುಮೇಹ, ಎಚ್‍ಐವಿ ಸೇರಿದಂತೆ ಹಲವು ಪರೀಕ್ಷೆಗಳನ್ನು ನಡೆಸಲಾಯಿತು.
‘ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಹೀಗಗಿ ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಬೇಕು. ಕುದಿಸಿ, ಆರಿಸಿದ ನೀರು ಹಾಗೂ ಬಿಸಿ ಆಹಾರ ಸೇವಿಸಬೇಕು’ ಎಂದು ಪಿಡಿಒ ಸುಜಾತಾ ನಂದಿ ಸಲಹೆ ನೀಡಿದರು.
‘ಸೊಳ್ಳೆಗಳಿಂದ ಬರುವ ಡೆಂಗಿ, ಮಲೇರಿಯಾದಂತಹ ರೋಗಗಳನ್ನು ದೂರವಿಡಲು ಪ್ಲಾಸ್ಟಿಕ್ ವಸ್ತು ಹಾಗೂ ಸಂಪುಗಳಲ್ಲಿ ನೀರು ಸಂಗ್ರಹಿಸಿ ತೆರೆದು ಇಡಬಾರದು’ ಎಂದು ತಿಳಿಸಿದರು.
ಶಿಬಿರಕ್ಕೆ ಚಾಲನೆ ನೀಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಾಂತವೀರ ಹಜ್ಜರಗಿ, ಬ್ರಿಮ್ಸ್ ಐಸಿಟಿಸಿ ಆಪ್ತ ಸಮಾಲೋಚಕ ಸಿದ್ದಪ್ಪ, ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿ ಅರವಿಂದ ಕುಲಕರ್ಣಿ, ಪಶು ವೈದ್ಯಕೀಯ ವಿಶ್ವವಿದ್ಯಾಲಯದ ನಿವೃತ್ತ ಅಧಿಕಾರಿ ವೀರಭದ್ರಪ್ಪ ಉಪ್ಪಿನ್ ಮಾತನಾಡಿದರು.
ಎಲ್.ಬಿ.ಎಸ್. ಸಂಸ್ಥೆಯ ಆಪ್ತ ಸಮಾಲೋಚಕ ಆನಂದ್ ಪೌಲ್, ಮೇಲ್ವಿಚಾರಕ ಅಶೋಕ್ ಪಾಂಚಾಳ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ, ಲಾಲ್ ಬಹಾದ್ದೂರ್ ಶಿಕ್ಷಣ ಸಂಸ್ಥೆ ಹಾಗೂ ಬ್ರಿಮ್ಸ್‌ನ ಐಸಿಟಿಸಿ ವಿಭಾಗದ ಸಹಯೋಗದಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.