ADVERTISEMENT

ಭಾರಿ ಮಳೆ ಮುನ್ಸೂಚನೆ; ಬೀದರ್ ಜಿಲ್ಲೆ‌ಯ ಶಾಲೆ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ರಜೆ ಘೋಷಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಬುಧವಾರ ಆದೇಶ ಹೊರಡಿಸಿದ್ದಾರೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2023, 6:24 IST
Last Updated 26 ಜುಲೈ 2023, 6:24 IST
   

ಬೀದರ್: ಜಿಲ್ಲೆಯಾದ್ಯಂತ ಜುಲೈ 27ರಂದು (ಗುರುವಾರ) ಭಾರಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿರುವುದರಿಂದ ಅಂದು ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಬುಧವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ 100 ರಿಂದ 130 ಮಿ.ಮೀ. ಮಳೆಯಾಗುವ ಸಾಧ್ಯತೆ‌ ಇದೆ. ಯಾರೂ ಕೂಡ ಅನಗತ್ಯವಾಗಿ ಹೊರಗೆ ಓಡಾಡಬಾರದು. ತಗ್ಗು ಪ್ರದೇಶ, ಹಳ್ಳ, ನದಿಗೆ ಹೊಂದಿಕೊಂಡಿರುವ ಪ್ರದೇಶದ ಜನ ಎಚ್ಚರಿಕೆ ವಹಿಸಬೇಕು. ನೀರು ಹರಿಯುತ್ತಿರುವ ಮಾರ್ಗಗಳನ್ನು ಜನ ದಾಟಬಾರದು ಎಂದು ತಿಳಿಸಿದ್ದಾರೆ.

ಜಲಾಶಯದಿಂದ ನದಿಗೆ ನೀರು

ADVERTISEMENT

ಹುಮನಾಬಾದ್ ಬಳಿಯ ಕಾರಂಜಾ ಜಲಾಶಯ ತುಂಬುವ ಹಂತಕ್ಕೆ ಬಂದಿರುವುದರಿಂದ ಮಂಗಳವಾರ ರಾತ್ರಿಯಿಂದ ನದಿಗೆ ನೀರು ಹರಿಸಲಾಗುತ್ತಿದೆ.

7.78 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯ ಬಹುತೇಕ ಭರ್ತಿಯಾಗುವುದಕ್ಕೆ ಬಂದಿರುವುದರಿಂದ ಸದ್ಯ ಆರು ಕ್ರಸ್ಟ್ ಗೇಟ್ ಗಳ ಪೈಕಿ ಎರಡು ಗೇಟ್ ತೆಗೆದು ನದಿಗೆ 3 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ.

ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಎರಡನೇ ದಿನವೂ ಜಿಟಿಜಿಟಿ ಮಳೆ ಮುಂದುವರೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.