ಬೀದರ್: ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ನಾಮ ನಿರ್ದೇಶಿತ ಸದಸ್ಯರ ಸನ್ಮಾನ ಕಾರ್ಯಕ್ರಮ ನಗರದ ಸರ್ವ ಶಿಕ್ಷಣ ಅಭಿಯಾನ ಸಭಾಂಗಣದಲ್ಲಿ ನಡೆಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಲೀಂ ಪಾಶಾ ಕಾರ್ಯಕ್ರಮ ಉದ್ಘಾಟಿಸಿ, ಸಂಘಟನೆಯಲ್ಲಿ ಬಲವಿದೆ. ಒಗ್ಗಟ್ಟಿನಿಂದ ಹೋರಾಡಿ ಹಕ್ಕು ಪಡೆಯಲು ಸಂಘಟನೆ ನೆರವಾಗುತ್ತದೆ ಎಂದು ಹೇಳಿದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹೆಬೂಬ್ ಪಟೇಲ್ ಮಾತನಾಡಿ, ಶಿಕ್ಷಕರ ಏನೇ ಸಮಸ್ಯೆಗಳಿದ್ದರೂ, ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ರೆಡ್ಡಿ ಮಾಲಿಪಾಟೀಲ, ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ, ಬಡ್ತಿ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಭೀಮಣ್ಣ ಹಡಪದ, ಅನುದಾನಿತ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ ಪಾಟೀಲ, ಪ್ರಶಾಂತ ರಾಗಾ, ಸಂಜೀವಕುಮಾರ ಸೂರ್ಯವಂಶಿ ಇದ್ದರು.
ಜಿಲ್ಲಾ ಘಟಕದ ಮಹಿಳಾ ಸಂಘಟನಾ ಕಾರ್ಯದರ್ಶಿ ಪುಷ್ಪಾವತಿ ಚಿಕುರ್ತೆ ಸೇರಿ ನಾಮನಿರ್ದೇಶಿತ 12 ಮಂದಿ ಪದಾಧಿಕಾರಿಗಳು ಹಾಗೂ ನಿರ್ದೇಶಕರನ್ನು ಸನ್ಮಾನಿಸಲಾಯಿತು.
ಸಿದ್ದಮ್ಮ ಹವಳಕಾಯಿ, ಶಂಕರ ಬಾಪುರೆ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.