ಜನವಾಡ (ಬೀದರ್): ಕಾಡವಾದ ಗ್ರಾಮದಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಸೋಮವಾರ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು, ಟ್ಯಾಕ್ಟರ್ ಹಾಗೂ ಮೂರು ಟಿಲ್ರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿ ಲೋಕೇಶ ಹೂಗಾರ್ ಹಾಗೂ ಬಗದಲ್ ಕಂದಾಯ ನಿರೀಕ್ಷಕರ ನೇತೃತ್ವದಲ್ಲಿ ದಾಳಿ ನಡೆದಿದೆ. ಗಣಿಗಾರಿಕೆಗೆ ಬಳಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಟಿಲ್ಲರ್‍ಗಳನ್ನು ಬಗದಲ್ ಠಾಣೆ ವಶಕ್ಕೆ ಒಪ್ಪಿಸಲಾಗಿದೆ.
‘ದಾಳಿ ವೇಳೆ ನಾಲ್ಕು ಕಡೆ ಪಟ್ಟಾ ಭೂಮಿಯಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು ಕಂಡು ಬಂದಿದೆ’ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ವಿಶ್ವನಾಥ ತಿಳಿಸಿದ್ದಾರೆ.
‘ಗಣಿಗಾರಿಕೆ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.