ಕಮಠಾಣ (ಜನವಾಡ): ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಹಾಸನ ಪಶು ವೈದ್ಯಕೀಯ ಕಾಲೇಜು ಎರಡನೇ ದಿನವೂ ಅಗ್ರಸ್ಥಾನ ಕಾಯ್ದುಕೊಂಡಿದೆ.
ಬುಧವಾರದ ಸ್ಪರ್ಧೆಯ ಮುಕ್ತಾಯದ ನಂತರ 65 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಮಂಗಳೂರು ಮೀನುಗಾರಿಕೆ ಕಾಲೇಜು 51 ಅಂಕಗಳೊಂದಿಗೆ ದ್ವಿತೀಯ, ಶಿವಮೊಗ್ಗ 42 ಅಂಕಗಳೊಂದಿಗೆ ತೃತೀಯ ಹಾಗೂ ಬೆಂಗಳೂರು ಪಶು ವೈದ್ಯಕೀಯ ಕಾಲೇಜು 31 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಮಹಿಳೆಯರ ವಿಭಾಗದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಹಾಸನ ಪಶು ವೈದ್ಯಕೀಯ ಕಾಲೇಜಿನ ಕೃಪಾ, ಸೌಪರ್ಣಿಕ ಬೆಳ್ಳಿ, ಬೀದರ್ ಕಾಲೇಜಿನ ತೇಜಸ್ವಿನಿ ಕಂಚಿನ ಪದಕ ಜಯಿಸಿದರು. ಎತ್ತರ ಜಿಗಿತ, ಉದ್ದ ಜಿಗಿತ, ಜಾವೆಲಿನ್ ಥ್ರೋ ಸ್ಪರ್ಧೆಗಳೂ ನಡೆದವು.
ಪುರುಷರ ವಿಭಾಗದಲ್ಲಿ ಕ್ರಿಕೆಟ್, ಫುಟ್‍ಬಾಲ್, ಟೇಬಲ್ ಟೆನಿಸ್, ಉದ್ದ ಜಿಗಿತ, ಎತ್ತರ ಜಿಗಿತ, ಕಬಡ್ಡಿ ಹಾಗೂ ಕೊಕ್ಕೊ ಸ್ಪರ್ಧೆಗಳು ಜರುಗಿದವು. ವಿಜೇತರಿಗೆ ಬೀದರ್ ಪಶು ವೈದ್ಯಕೀಯ ಕಾಲೇಜು ಡೀನ್ ಎಂ.ಕೆ.ತಾಂದಳೆ ಪದಕ ಪ್ರದಾನ ಮಾಡಿದರು. ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಶ್ರೀಕಾಂತ ಕುಲಕರ್ಣಿ, ಕಾರ್ಯನಿರ್ವಾಹಕ ಎಂಜಿನಿಯರ್ ದಾಮೋಧರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.